ಕರ್ನಾಟಕ

karnataka

ETV Bharat / state

ಎಂ.ಎಸ್.ಜಿ.ಪಿ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಬಿಬಿಎಂಪಿ ಆಯುಕ್ತರು ಭೇಟಿ, ಪರಿಶೀಲನೆ - ತ್ಯಾಜ್ಯ ಸಂಸ್ಕರಣೆ ಮಾಡುವ ಕಾರ್ಯ ವೈಖರಿ

ದೊಡ್ಡಬಳ್ಳಾಪುರದ ಬಳಿ ಇರುವ ಎಂ.ಎಸ್.ಜಿ.ಪಿ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಬಿಬಿಎಂಪಿ ಆಯುಕ್ತರು ಅಧಿಕಾರಿಗಳ ಜೊತೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Bbmp
Bbmp

By

Published : Oct 24, 2020, 11:46 AM IST

ಬೆಂಗಳೂರು: ಬಿಬಿಎಂಪಿ ಆಡಳಿತಗಾರ ಹಾಗೂ ಆಯುಕ್ತ ಮಂಜುನಾಥ್ ಪ್ರಸಾದ್ ಅವರು ದೊಡ್ಡಬಳ್ಳಾಪುರದ ಬಳಿ ಇರುವ ಎಂ.ಎಸ್.ಜಿ.ಪಿ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುವ ತ್ಯಾಜ್ಯದಲ್ಲಿ ಪ್ರತಿನಿತ್ಯ 450 ರಿಂದ 500 ಟನ್ ಮಿಶ್ರ ತ್ಯಾಜ್ಯ ಎಂ.ಎಸ್.ಜಿ.ಪಿ ಸಂಸ್ಕರಣಾ ಘಟಕಕ್ಕೆ ಬರುತ್ತಿದೆ. ಮಿಶ್ರ ತ್ಯಾಜ್ಯದ ಜೊತೆಗೆ ವಿಂಗಡಣೆಯಾದಂತಹ ಹಸಿ ತ್ಯಾಜ್ಯವನ್ನು ಹೆಚ್ಚಿನ ಮಟ್ಟದಲ್ಲಿ ಕಳುಹಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿ, ತ್ಯಾಜ್ಯ ಸಂಸ್ಕರಣೆ ಮಾಡುವ ಕಾರ್ಯ ವೈಖರಿ, ಸಾವಯುವ ಗೊಬ್ಬರ ಹಾಗೂ ಪ್ಯಾಕ್ ಮಾಡುವುದನ್ನು ಪರಿಶೀಲನೆ ನಡೆಸಿದರು.

ಇದೇ ವೇಳೆ ಪಾಲಿಕೆ ವ್ಯಾಪ್ತಿಯಲ್ಲಿರುವ ಸಂಸ್ಕರಣಾ ಘಟಕಗಳಿಂದ ಸ್ಥಳೀಯರಿಗೆ ಯಾವುದೇ ರೀತಿಯ ಸಮಸ್ಯೆ ಆಗದಂತೆ, ವಾಸನೆ ಬಾರದಂತೆ ತಂತ್ರಜ್ಞಾನ ಬಳಸಿಕೊಂಡು ಕೆಲಸ ಮಾಡಬೇಕು, ಘಟಕಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಿ ಹೆಚ್ಚು ತ್ಯಾಜ್ಯವನ್ನು ಸಂಸ್ಕರಣೆ ಮಾಡಿ, ಸಾವಯವ ಗೊಬ್ಬರ ತಯಾರಿಸುವ ನಿಟ್ಟಿನಲ್ಲಿ ಕೆಲಸ ಮಾಡಲು ಆಡಳಿತಗಾರರು ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಘಟಕದ ಮುಖ್ಯಸ್ಥರೊಬ್ಬರು, ಹೆಚ್ಚು ಸ್ಥಳಾವಕಾಶವಿರುವುದರಿಂದ ಹೆಚ್ಚು ವಾಸನೆ ಬರುವುದಿಲ್ಲ. ಮಳೆ, ಜೋರಾಗಿ ಗಾಳಿ ಬೀಸಿದಾಗ ಮಾತ್ರ ಸ್ವಲ್ಪ ವಾಸನೆ ಬರುತ್ತದೆ. ಯಾವುದೇ ಸಮಸ್ಯೆ ಇಲ್ಲ. ಘಟಕದಲ್ಲಿ ಪ್ರತಿ ನಿತ್ಯ 100 ಟನ್ ಸಾವಯವ ಗೊಬ್ಬರ ತಯಾರಿಸಲಾಗುತ್ತಿದೆ. 50 ಕೆ.ಜಿ ಬ್ಯಾಗ್ ಪ್ಯಾಕ್ ಮಾಡಿ ಕೃಷಿ ಇಲಾಖೆಗೆ ರವಾನೆ ಮಾಡಲಾಗುತ್ತದೆ. ರೈತರು ಕೂಡ ನೇರವಾಗಿ ಖರೀದಿಸಲು ಅವಕಾಶವಿದೆ ಎಂದು ಮಾಹಿತಿ ನೀಡಿದರು.

ಈ ವೇಳೆ ಜಂಟಿ ಆಯುಕ್ತರು (ಘನತ್ಯಾಜ್ಯ) ಸರ್ಫರಾಜ್ ಖಾನ್ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ABOUT THE AUTHOR

...view details