ಕರ್ನಾಟಕ

karnataka

ETV Bharat / state

ಬಿಬಿಎಂಪಿ ಚುನಾವಣೆಗೆ ಆಗಸ್ಟ್ 25 ರಂದು ಮತದಾರರ ಕರಡು ಪಟ್ಟಿ ಪ್ರಕಟ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ(ಬಿಬಿಎಂಪಿ)ಯ ವಾರ್ಡ್​ಗಳ ಸಂಖ್ಯೆ 198 ರಿಂದ 243 ಕ್ಕೇರಿದ್ದು, ಚುನಾವಣೆಗೆ ಸಿದ್ಧತೆಗಳು ನಡೆಯುತ್ತಿವೆ.

ಬಿಬಿಎಂಪಿ
bbmp

By

Published : Aug 21, 2022, 6:52 AM IST

ಬೆಂಗಳೂರು: ಕಳೆದ ಎರಡು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆಗೆ ರಂಗ ಸಜ್ಜಾಗಿದೆ. ಆಗಸ್ಟ್ 25 ರಂದು ಮತದಾರರ ಕರಡು ಪಟ್ಟಿ ಪ್ರಕಟವಾಗಲಿದೆ.

ಪಾಲಿಕೆ ಚುನಾವಣೆ ಸಂಬಂಧ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಬಸವರಾಜು ಅಧ್ಯಕ್ಷತೆಯಲ್ಲಿ ಶನಿವಾರ ಪಾಲಿಕೆಯ ಹಿರಿಯ ಅಧಿಕಾರಿಗಳ ಸಭೆ ನಡೆಯಿತು. ಸಭೆಯಲ್ಲಿ ಮತದಾರರ ಕರಡು ಪಟ್ಟಿ ಪ್ರಕಟಗೊಂಡ ಕೂಡಲೇ ಪಾಲಿಕೆಯ ಅಂತರ್ಜಾಲ ತಾಣದ ಜೊತೆಗೆ ನೋಂದಾಯಿತ ರಾಜಕೀಯ ಪಕ್ಷಗಳ ಕಚೇರಿ ಹಾಗೂ ನಿವಾಸಿ ಕ್ಷೇಮಾಭಿವೃದ್ಧಿ ಸಂಘಗಳಿಗೆ ಮತದಾರರ ಕರಡು ಪಟ್ಟಿಯ ಪ್ರತಿ ನೀಡುವಂತೆ ಪಾಲಿಕೆ ಅಧಿಕಾರಿಗಳಿಗೆ ಬಸವರಾಜು ಸೂಚಿಸಿದರು.

ಇದನ್ನೂ ಓದಿ:ಬಿಬಿಎಂಪಿ ಚುನಾವಣೆಗೆ ನಾವು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ : ಡಿ ಕೆ ಶಿವಕುಮಾರ್​

ಈ ಬಾರಿ ವಾರ್ಡ್​ಗಳ ಸಂಖ್ಯೆ 198 ರಿಂದ 243 ಕ್ಕೇರಿದೆ. ವಾರ್ಡ್ ಮರು ವಿಂಗಡನೆಯಾಗಿದ್ದು ಮೊದಲು ಮತಗಟ್ಟೆಗಳ ಪರಿಶೀಲನೆ ಆಗಬೇಕು. ವಾರ್ಡ್​ಗಳಿಗೆ ಉಸ್ತುವಾರಿ ಅಧಿಕಾರಿಗಳನ್ನು ಗುರುತಿಸಿ ನೇಮಕ ಮಾಡಲು ಪಟ್ಟಿ ಸಿದ್ಧಗೊಳಿಸಬೇಕಿದೆ ಎಂದು ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪ್ರತಿ ಬಾರಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತದಾನದ ಪ್ರಮಾಣ ಅತ್ಯಂತ ಕಡಿಮೆ ಇರುತ್ತದೆ. ಇದನ್ನು ಹೆಚ್ಚಿಸಲು ವ್ಯಾಪಕ ಪ್ರಚಾರ ಕಾರ್ಯ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಅವಶ್ಯಕತೆ ಇದೆ. ಆದರೆ, ಈ ನಿಟ್ಟಿನಲ್ಲಿ ವೆಚ್ಚ ಮಾಡುವಲ್ಲಿ ಮಿತವ್ಯಯ ಸಾಧಿಸುವುದು ಮುಖ್ಯ ಹಾಗೂ ಸೂಕ್ತ ಎಂದು ಚುನಾವಣಾ ಆಯೋಗದ ಆಯುಕ್ತರು ಸಲಹೆ ನೀಡಿದರು.

ಇದನ್ನೂ ಓದಿ:ಬಿಬಿಎಂಪಿ ಮೀಸಲಾತಿ ಪಟ್ಟಿ ಪ್ರಕಟ: ಕಾಂಗ್ರೆಸ್​ ಕಾನೂನು ಹೋರಾಟ ಮಾಡಲಿ- ಸಿಎಂ

ಪಾಲಿಕೆಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ವಿಶೇಷ ಆಯುಕ್ತರು, ಎಲ್ಲಾ ಎಂಟು ವಲಯಗಳ‌ ಜಂಟಿ ಆಯುಕ್ತರು, ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯ ಪ್ರತಿನಿಧಿ, ರಾಜ್ಯ ಚುನಾವಣಾ ಆಯೋಗದ ಕಾರ್ಯದರ್ಶಿ ಹೊನ್ನಾಂಬ ಸಭೆಯಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ:ಬಿಬಿಎಂಪಿ ಚುನಾವಣೆ ವಿಚಾರಣೆ ಆಗಸ್ಟ್ 29ಕ್ಕೆ ಮುಂದೂಡಿದ ಹೈಕೋರ್ಟ್.. ಕಾಂಗ್ರೆಸ್ ನಾಯಕ ನಾಗರಾಜು

ABOUT THE AUTHOR

...view details