ಬೆಂಗಳೂರು: ಸದ್ಯದ್ರಲ್ಲೇ ಎದುರಾಗಲಿರುವ ಬಿಬಿಎಂಪಿ ಚುನಾವಣೆಗೆ ಬಿಜೆಪಿ ಭರ್ಜರಿ ತಾಲೀಮು ಆರಂಭಿಸಿದ್ದು, ಶತಾಯಗತಾಯ ಆಡಳಿತ ಚುಕ್ಕಾಣಿ ಹಿಡಿಯಲು ಮಾಸ್ಟರ್ ಪ್ಲಾನ್ ರೂಪಿಸುತ್ತಿದೆ. ಅತಿದೊಡ್ಡ ಪಕ್ಷವಾಗಿದ್ದರೂ ಕಳೆದ ಬಾರಿ ಅಧಿಕಾರಕ್ಕೇರಲು ವಿಫಲವಾಗಿದ್ದ ಕೇಸರಿಪಡೆ, ಈ ಬಾರಿ ಅಂತಹ ಲೋಪವಾಗದಂತೆ ಮುನ್ನೆಚ್ಚರಿಕೆ ವಹಿಸಲು ಸರಣಿ ಸಭೆ ಮೂಲಕ ತಂತ್ರ ರೂಪಿಸಲು ಮುಂದಾಗಿದೆ.
ಇದನ್ನೂ ಓದಿ: ಕೋವಿಡ್ 3ನೇ ಅಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾದ್ರೂ ಆತಂಕ ಮಾತ್ರ ದೂರ..
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ದೃಷ್ಟಿಯಿಂದ ಪಕ್ಷವನ್ನು ಸಂಘಟಿಸಲು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮೂರು ದಿನಗಳ ಸಭೆ ಆಯೋಜಿಸಲಾಗಿದೆ. ಜನವರಿ 25, 26, 27 ರಂದು ಮೂರು ದಿನವೂ ಬೆಳಗ್ಗೆ 10 ಗಂಟೆಗೆ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸಭೆ ನಡೆಯಲಿದೆ.
ಬೆಂಗಳೂರು ಉತ್ತರ ಜಿಲ್ಲೆ, ದಕ್ಷಿಣ ಜಿಲ್ಲೆ, ಮತ್ತು ಕೇಂದ್ರ ಜಿಲ್ಲಾ ಪದಾಧಿಕಾರಿಗಳು, ಮಂಡಳಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಶಾಸಕರು ಹಾಗೂ ಚುನಾಯಿತ ಜನಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ