ಬೆಂಗಳೂರು:ಜಯನಗರದ 4ನೇ ಬ್ಲಾಕ್‌ನಲ್ಲಿ ಮೂರು ಶಾಪಿಂಗ್ ಕಾಂಪ್ಲೆಕ್ಸ್‌ಗಳನ್ನು ಹೊಸದಾಗಿ ನಿರ್ಮಾಣ ಮಾಡಲಾಗಿದ್ದು, ಕಾಂಪ್ಲೆಕ್ಸ್‌ಗಳಲ್ಲಿ ದ್ವಿಚಕ್ರ ವಾಹನ ಹಾಗೂ ನಾಲ್ಕು ಚಕ್ರದ ವಾಹನಗಳನ್ನು ನಿಲ್ಲಿಸುವ ಸಲುವಾಗಿ ನೆಲಮಹಡಿ-1 ಹಾಗೂ 2ರಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುವುದು ಎಂದು ಬಿಬಿಎಂಪಿ ಹೈಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿದೆ.
ಪಾರ್ಕಿಂಗ್ ವ್ಯವಸ್ಥೆ ಕುರಿತು ಹೈಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿದ ಬಿಬಿಎಂಪಿ - ಬೆಂಗಳೂರು ನೂತನ ಶಾಪಿಂಗ್ ಕಾಂಪ್ಲೆಕ್ಸ್ ನಿರ್ಮಾಣ
ಜಯನಗರದ 4ನೇ ಬ್ಲಾಕ್‌ನಲ್ಲಿ ಮೂರು ಶಾಪಿಂಗ್ ಕಾಂಪ್ಲೆಕ್ಸ್‌ಗಳನ್ನು ಹೊಸದಾಗಿ ನಿರ್ಮಾಣ ಮಾಡಲಾಗಿದ್ದು, ಕಾಂಪ್ಲೆಕ್ಸ್‌ಗಳಲ್ಲಿ ವಾಹನಗಳನ್ನು ನಿಲ್ಲಿಸುವ ಸಲುವಾಗಿ ನೆಲಮಹಡಿ-1 ಹಾಗೂ 2ರಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುವುದು ಎಂದು ಬಿಬಿಎಂಪಿ ಹೈಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿದೆ.
ಬಿಬಿಎಂಪಿ ವಕೀಲರು ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಸಿ, ಜಯನಗರದ 4ನೇ ಬ್ಲಾಕ್‌ನಲ್ಲಿ ಏಳು ಮಹಡಿಗಳ ಶಾಪಿಂಗ್ ಕಾಂಪ್ಲೆಕ್ಸ್ ನಿರ್ಮಾಣವನ್ನ ಕಳೆದ ವರ್ಷ ಮಾಡಿದ್ದು, ಇದಕ್ಕೆ 40 ಕೋಟಿ ರೂ. ಖರ್ಚು ಮಾಡಲಾಗಿದೆ. ಸದ್ಯ ಮತ್ತೆ ಹೊಸದಾಗಿ ನಿರ್ಮಾಣವಾಗುತ್ತಿರುವ ಮೂರು ಕಾಂಪ್ಲೆಕ್ಸ್ಗೆ ಬರುವವರಿಗೆ ಕಾಂಪ್ಲೆಕ್ಸ್‌ಗಳ ನೆಲಮಹಡಿ-1 ಹಾಗೂ 2ರಲ್ಲಿ ವಾಹನಗಳ ನಿಲುಗಡೆಗೆ ವ್ಯವಸ್ಥೆ ಕಲ್ಪಿಸಿಕೊಡಲಾಗುವುದು. ಹಾಗೂ ಕಳೆದ ವರ್ಷ ನಿರ್ಮಾಣವಾದ ಕಾಂಪ್ಲೆಕ್ಸ್‌ನ ನೆಲಮಹಡಿಯಲ್ಲಿರುವ ಮಳಿಗೆಗಳನ್ನು ಹೊಸ ಕಾಂಪ್ಲೆಕ್ಸ್‌ಗಳಿಗೆ ಸ್ಥಳಾಂತರಿಸಲಾಗುವುದು ಎಂದು ಬಿಬಿಎಂಪಿ ಪ್ರಮಾಣಪತ್ರದ ಮೂಲಕ ತಿಳಿಸಿದೆ.
ಈ ಕುರಿತು ಸಾಮಾಜಿಕ ಕಾರ್ಯಕರ್ತ ಹಿರೇಮಠ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಿನ್ನೆ ಹೈಕೋರ್ಟ್ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ವಾದ ಆಲಿಸಿದ ನ್ಯಾಯಾಲಯ ಅಗ್ನಿಶಾಮಕ ಸಿಬ್ಬಂದಿ ಏನು ಕ್ರಮ ಕೈಗೊಂಡಿದ್ದೀರಿ ಎಂಬುದರ ಬಗ್ಗೆ ಮುಂದಿನ ವಿಚಾರಣೆ ವೇಳೆ ಮಾಹಿತಿ ನೀಡುವಂತೆ ಸೂಚಿಸಿ ವಿಚಾರಣೆ ಮುಂದೂಡಿಕೆ ಮಾಡಿದೆ.