ಬೆಂಗಳೂರು: ಮಹಾವೀರ ಜಯಂತಿಯ ಹಿನ್ನೆಲೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಏಪ್ರಿಲ್ 4 ರ ಮಂಗಳವಾರದಂದು ನಗರದಲ್ಲಿ ಮಾಂಸ ಮಾರಾಟ ಮತ್ತು ಪ್ರಾಣಿವಧೆ ನಿಷೇಧಿಸಲಾಗಿದೆ. ಏ.4 ರ ಮಹಾವೀರ ಜಯಂತಿಯ ಪ್ರಯುಕ್ತ ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ಮತ್ತು ಪ್ರಾಣಿವಧೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎನ್ನುವ ಸುತ್ತೋಲೆಯನ್ನು ಜಂಟಿ ನಿರ್ದೇಶಕರು (ಪಶುಪಾಲನೆ) ಹೊರಡಿಸಿದ್ದಾರೆ.
ಏ. 4 ಮಹಾವೀರ ಜಯಂತಿ.. ಪ್ರಾಣಿವಧೆ, ಮಾಂಸ ಮಾರಾಟ ನಿಷೇಧಿಸಿ ಬಿಬಿಎಂಪಿ ಸುತ್ತೋಲೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಹಾವೀರ ಜಯಂತಿಯ ಹಿನ್ನೆಲೆ ಏಪ್ರಿಲ್ 4 ರಂದು ಮಂಗಳವಾರ ಬೆಂಗಳೂರಿನಲ್ಲಿ ಮಾಂಸ ಮಾರಾಟ ಮತ್ತು ಪ್ರಾಣಿವಧೆ ನಿಷೇಧಿಸಲಾಗಿದೆ.
ಮಹಾವೀರ ಜಯಂತಿಯ ಹಿನ್ನಲೆ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ
ರಾಮನವಮಿ, ಶಿವರಾತ್ರಿ ಸಂದರ್ಭದಲ್ಲಿ ಪ್ರಾಣಿ ಬಲಿ ನಿಷೇಧಿಸಿದ್ದ ಪಾಲಿಕೆ:ಫೆಬ್ರವರಿಯಲ್ಲಿ ಮಹಾ ಶಿವರಾತ್ರಿ ಸಂದರ್ಭದಲ್ಲಿ ಮತ್ತು ಮಾರ್ಚ್ ತಿಂಗಳಿನಲ್ಲಿ ರಾಮನವಮಿಯ ಹಿನ್ನೆಲೆ ಮಾಂಸ ಮಾರಾಟ ಮತ್ತು ಪ್ರಾಣಿವಧೆಯನ್ನು ನಿಷೇಧಿಸಿ ಬಿಬಿಎಂಪಿ ಇದೇ ರೀತಿಯ ಆದೇಶವನ್ನು ಹೊರಡಿಸಿತ್ತು.
ಇದನ್ನೂ ಓದಿ:ಬೆಂಗಳೂರಲ್ಲಿ ಐಪಿಎಲ್ ಪಂದ್ಯಗಳು ನಡೆಯುವ ದಿನ ವಿಶೇಷ ಬಸ್ ಸೌಲಭ್ಯ...