ಕರ್ನಾಟಕ

karnataka

By

Published : Oct 14, 2021, 6:45 AM IST

ETV Bharat / state

2 ರಿಂದ 17 ವರ್ಷದೊಳಗಿನ ಮಕ್ಕಳಿಗೆ ಕೋವಿಡ್‌ ಲಸಿಕೆ ನೀಡಲು ಬಿಬಿಎಂಪಿ ಸಿದ್ಧತೆ

ಕೇಂದ್ರ ಸರ್ಕಾರ 2 ರಿಂದ 17 ವರ್ಷದ ಮಕ್ಕಳಿಗೆ ಕೋವಿಡ್​ ಲಸಿಕೆ ನೀಡಲು ಸೂಚನೆ ನೀಡಿದೆ. ಈ ನಿಟ್ಟಿನಲ್ಲಿ ಬಿಬಿಎಂಪಿ ಮಕ್ಕಳ ಸರ್ವೆ ಕಾರ್ಯ ಮುಗಿಸಿದೆ. ಮೊದಲ ಹಂತವಾಗಿ 12 ವರ್ಷದಿಂದ 17 ವರ್ಷದ ಮಕ್ಕಳಿಗೆ ಲಸಿಕೆ ನೀಡಲು ತಯಾರಿ ನಡೆಯುತ್ತಿದೆ.

bbmp-is-ready-to-vaccinate-children-2-17-years-old
ಗೌರವ್​ ಗುಪ್ತಾ

ಬೆಂಗಳೂರು: 2 ರಿಂದ 17 ವರ್ಷದ ಮಕ್ಕಳಿಗೆ ಕೋವಿಡ್​ ಲಸಿಕೆ ಅಭಿಯಾನ ಪ್ರಾರಂಭಿಸಲಾಗುವುದು. ಈ ನಿಟ್ಟಿನಲ್ಲಿ ಮಕ್ಕಳ ಸರ್ವೆ ಕಾರ್ಯ ಮಾಡಲಾಗಿದೆ. ಲಸಿಕೆ ಹಾಕಲು ಆರಂಭಿಸಿದಾಗ ಯಾವುದೇ ರೀತಿಯ ಕೊರತೆ ಆಗದಂತೆ ನೋಡಿಕೊಳ್ಳಲಾಗುವುದು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ಗೌರವ್​ ಗುಪ್ತಾ ಹೇಳಿದರು.

ಬಿಬಿಎಂಪಿ ಆಯುಕ್ತರ ಪ್ರತಿಕ್ರಿಯೆ

ಕೊರೊನಾ ಮೂರನೇ ಅಲೆ ಮಕ್ಕಳ ಮೇಲೆ ಪ್ರಭಾವ ಬೀರಲಿದೆ ಎಂದು ತಜ್ಞರು ಹೇಳಿದ್ದಾರೆ. ಹೀಗಾಗಿ ಸರ್ಕಾರ ಹಾಗೂ ಬಿಬಿಎಂಪಿ ಸಕಲ ಸಿದ್ದತೆ ಮಾಡಿಕೊಂಡಿದೆ. ಕೇಂದ್ರ ಸರ್ಕಾರ 18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡಬಹುದು ಎಂದು ಸೂಚನೆ ನೀಡಿದ್ದು, 2-17 ವರ್ಷದ ಮಕ್ಕಳ ಸರ್ವೇ ಕಾರ್ಯ ಮಾಡಲಾಗಿದೆ. ಮೊದಲ ಹಂತದಲ್ಲಿ 12 ವರ್ಷದಿಂದ 17 ವರ್ಷದ ಮಕ್ಕಳಿಗೆ ಲಸಿಕೆ ನೀಡಲಾಗುತ್ತದೆ ಎಂದು ಅವರು ತಿಳಿಸಿದರು.

ABOUT THE AUTHOR

...view details