ಬೆಂಗಳೂರು: ನಗರದಲ್ಲಿ 400 ಕಟ್ಟಡಗಳಿಗೆ ನೋಟಿಸ್ ನೀಡಲಾಗಿದೆ. ತೀವ್ರವಾಗಿ ಶಿಥಿಲವಾದ ಕಟ್ಟಡಗಳ ತೆರವು ಕಾರ್ಯಾಚರಣೆ ನಡೆಯುತ್ತಿದೆ ಎಂದು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಸ್ಪಷ್ಟನೆ ನೀಡಿದ್ದಾರೆ.
ವಾಸವಾಗಿರುವಂತಹ ಮನೆಗಳಿಗೆ ಈಗಾಗಲೇ ನೋಟಿಸ್ ನೀಡಿದ್ದೇವೆ. ಕೆಲವರು ನಮ್ಮ ಮನೆ ಸರಿ ಇದೆ ಅಂತ ನೋಟಿಸ್ ಚಾಲೆಂಜ್ ಮಾಡಿ ಕೋರ್ಟ್ ಮೆಟ್ಟಿಲೇರಿದ್ದಾರೆ. ತೀವ್ರವಾಗಿ ಶಿಥಿಲವಾದ ಪರಿಸ್ಥಿತಿಯಲ್ಲಿರುವ ಕಟ್ಟಡಗಳ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಸರ್ವೆಯಲ್ಲಿ ತೀವ್ರ ಶಿಥಿಲಗೊಂಡ 400 ಕಟ್ಟಡಗಳನ್ನ ಗುರುತಿಸಲಾಗಿದ್ದು, ನೋಟಿಸ್ ನೀಡಲಾಗುತ್ತಿದೆ ಎಂದಿದ್ದಾರೆ.
ಬಿಬಿಎಂಪಿ ಮಕ್ಕಳಿಗೆ ಸುರಕ್ಷತೆ ಇಲ್ಲದ ವಾತಾವರಣದ ವಿಚಾರದ ಬಗ್ಗೆ ಮಾತನಾಡಿದ ಅವರು, ಬಿಬಿಎಂಪಿ ಶಾಲೆ ಮಕ್ಕಳಿಗೆ ಆಗಿರುವ ತೊಂದರೆ ಬಗ್ಗೆ ಶಿಕ್ಷಣ ಇಲಾಖೆಯಿಂದ ತನಿಖೆ ನಡೆಸಲಾಗುವುದು. ಮಕ್ಕಳ ಸುರಕ್ಷತೆ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ಮುಖ್ಯವಾಗಿ ಮಕ್ಕಳ ಸುರಕ್ಷತೆ ಬಗ್ಗೆ ಹೆಚ್ಚಿನ ಜಾಗೃತಿ ವಹಿಸಲಾಗುವುದು ಎಂದಿದ್ದಾರೆ.