ಬೆಂಗಳೂರು: ರಾಜಧಾನಿಯಲ್ಲಿ ಕೊರೊನಾ ಭೀತಿ ಹಿನ್ನೆಲೆ ಮೇಯರ್ ಗೌತಮ್ ಕುಮಾರ್ ಆರೋಗ್ಯ ಅಧಿಕಾರಿಗಳ ಸಭೆ ನಡೆಸುತ್ತಿದ್ದಾರೆ.
ಕೊರೊನಾ ಭೀತಿ: ಸಭೆಗೂ ಮುನ್ನ ಹ್ಯಾಂಡ್ ಸ್ಯಾನಿಟೈಸರ್ ಬಳಸಿದ ಮೇಯರ್ - ಸಭೆಗೂ ಮುನ್ನ ಹ್ಯಾಂಡ್ ಸ್ಯಾನಿಟೈಸರ್ ಬಳಸಿದ ಮೇಯರ್
ರಾಜಧಾನಿಯಲ್ಲಿ ಕೊರೊನಾ ಭೀತಿ ಹಿನ್ನೆಲೆ ಮೇಯರ್ ಗೌತಮ್ ಕುಮಾರ್ ಆರೋಗ್ಯ ಅಧಿಕಾರಿಗಳ ಸಭೆ ನಡೆಸುತ್ತಿದ್ದಾರೆ.

ಸಭೆಗೂ ಮುನ್ನ ಹ್ಯಾಂಡ್ ಸ್ಯಾನಿಟೈಸರ್ ಬಳಸಿ ತಮ್ಮ ಕೈಗಳನ್ನ ಸ್ವಚ್ಚಗೊಳಿಸಿಕೊಂಡರು. ಟೌನ್ಹಾಲ್ ನಲ್ಲಿ ನಡೆಯುತ್ತಿರುವ ಸಭೆಯಲ್ಲಿ ರಾಜ್ಯ ಆರೋಗ್ಯಾಧಿಕಾರಿಗಳು, ಬಿಬಿಎಂಪಿ ಆರೋಗ್ಯಾಧಿಕಾರಿಗಳು ಹಾಗೂ ರೆಸಿಡೆನ್ಶಿಯಲ್ ವೆಲ್ಫೇರ್ ಅಸೋಸಿಯೇಷನ್ ಸದಸ್ಯರು ಭಾಗಿಯಾಗಿದ್ದಾರೆ. ಸಭೆಯಲ್ಲಿ ಕೊರೊನಾ ವೈರಸ್ ಹೇಗೆ ಹರಡಲಿದೆ, ಯಾವೆಲ್ಲ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕೆಂಬ ಕುರಿತು ಅಧಿಕಾರಿಗಳಿಗೆ ಜಾಗೃತಿ ಮೂಡಿಸಲಾಗುತ್ತಿದೆ.
ಇದೇ ವೇಳೆ ಮಾತನಾಡಿದ ಮೇಯರ್ ಗೌತಮ್ ಕುಮಾರ್, ಕೊರೊನಾ ಭಯದ ವಾತಾವರಣ ಸೃಷ್ಟಿ ಮಾಡಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಈ ಸಭೆ ಏರ್ಪಡಿಸಲಾಗಿದೆ. ಶೇಕ್ ಹ್ಯಾಂಡ್ ಬದಲು, ನಮಸ್ತೆ ಮಾಡುವುದು. ಇಂತಹ ಸಂದೇಶವನ್ನು ನೀಡಲು ಈ ಸಭೆ ಕರೆಯಲಾಗಿದೆ. ಈಗಾಗಲೇ 3 ಸಭೆಗಳನ್ನು ಕರೆಯಲಾಗಿದೆ. ಸ್ವಚ್ಛತೆ ಬಗ್ಗೆಯೂ ಅರಿವು ಮೂಡಿಸುವ ಆಲೋಚನೆ ಇದೆ. ಸಭೆಯಲ್ಲಿ ಆರೋಗ್ಯಾಧಿಕಾರಿಗಳು, ವಿವಿಧ ನಾಗರಿಕ ಸಂಘ ಸಂಸ್ಥೆಗಳು ಭಾಗಿ ಆಗಿವೆ ಎಂದರು.