ಕರ್ನಾಟಕ

karnataka

ETV Bharat / state

ಪ್ರತೀ ವಲಯಗಳಲ್ಲಿ‌ ಮೂರು ಕೋವಿಡ್ ಕೇರ್‌ ಸೆಂಟರ್ ಸ್ಥಾಪನೆಗೆ ಬಿಬಿಎಂಪಿ ಆಯುಕ್ತರ ಸೂಚನೆ - ಬಿಬಿಎಂಪಿಯ ವಲಯ ಆಯುಕ್ತರು

ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ನಿಯಮಗಳ ಪಾಲನೆ, ವ್ಯಾಕ್ಸಿನೇಷನ್ ಹಾಗೂ ಟೆಸ್ಟಿಂಗ್ ಮಾಡುವ ಸಂಬಂಧ ಸಲಹೆ ಸೂಚನೆ ನೀಡಿದ್ದಾರೆ. ಆಶಾ ಕಾರ್ಯಕರ್ತೆಯರು ಲಸಿಕೆ ಪಡೆಯಲು ಅರ್ಹರಿರುವವರಿಗೆ ಅರಿವು ಮೂಡಿಸಿ ಲಸಿಕೆ ಪಡೆಯುವಂತೆ ಮಾಡಬೇಕು. ಜೊತೆಗೆ ವ್ಯಾಕ್ಸಿನೇಷನ್ ಸೈಟ್‌ಗಳಲ್ಲಿ ಲಸಿಕೆ ಪಡೆಯುವ ಸಂಖ್ಯೆಯನ್ನು ದ್ವಿಗುಣಗೊಳಿಸಲು ಕ್ರಮ ವಹಿಸಲು ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

bbmp
bbmp

By

Published : Apr 6, 2021, 7:35 PM IST

ಬೆಂಗಳೂರು: ನಗರದಲ್ಲಿ ಕೋವಿಡ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ಇಂದು ಬಿಬಿಎಂಪಿಯ ವಲಯ ಆಯುಕ್ತರು, ಜಂಟಿ ಆಯುಕ್ತರು ಹಾಗೂ ಆರೋಗ್ಯ ಅಧಿಕಾರಿಗಳ ಜೊತೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಸಭೆ ನಡೆಸಿದರು.

ಇಡೀ ರಾಜ್ಯದಲ್ಲಿ ಬೆಂಗಳೂರಲ್ಲೇ ಅತಿ ಹೆಚ್ಚು ಕೋವಿಡ್ ಹರಡುತ್ತಿರುವುದರಿಂದ ನಿಯಂತ್ರಣಕ್ಕೆ ಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರಮುಖವಾಗಿ ಕೋವಿಡ್ ರೋಗಿಗಳಿಗೆ ಯಾವುದೇ ರೀತಿಯಲ್ಲಿ ಔಷಧಿಗಳ ಕೊರತೆ ಆಗಬಾರದು ಎನ್ನುವ ಕಾರಣಕ್ಕೆ ವಿಕೇಂದ್ರೀಕೃತ ಕೋವಿಡ್ ಕೇರ್ ಸೆಂಟರ್‌ಗಳನ್ನು ಪ್ರತೀ ವಲಯದಲ್ಲಿ 50 ಹಾಸಿಗೆ ಸಾಮರ್ಥ್ಯದ ಮೂರು ಸಿಸಿಸಿ ಕೇಂದ್ರ ಗುರುತಿಸಿ ಸಿದ್ಧಪಡಿಸಲು ಸೂಚಿಸಿದ್ದಾರೆ.

ಹೋಟೆಲ್, ಖಾಲಿ ಇರುವ ಮನೆಗಳನ್ನು ಸೂಚಿಸಬಹುದೆಂದು ತಿಳಿಸಿದ್ದಾರೆ. ಈಗಾಗಲೇ ಎಚ್​​ಎಎಲ್, ಹಜ್ ಭವನದಲ್ಲಿ ಸಿಸಿಸಿ ಕೇಂದ್ರಗಳಲ್ಲಿ ರೋಗಿಗಳು ದಾಖಲಾಗಿದ್ದು, 200 ಹಾಸಿಗೆ ಸಾಮರ್ಥ್ಯ ಹೊಂದಿವೆ. ನಂತರದ ದಿನಗಳಲ್ಲಿ ವಲಯಗಳಲ್ಲಿ ಆರಂಭಿಸಲು ಅಧಿಕಾರಿಗಳಿಗೆ ಸೂಚಿಸಿದರು. ಇನ್ನು ನಗರದಲ್ಲಿ ಪ್ರತಿನಿತ್ಯ ಸುಮಾರು 35 ಸಾವಿರ ಮಂದಿ ಲಸಿಕೆ ಪಡೆಯುತ್ತಿದ್ದು, ಅದನ್ನು ದ್ವಿಗುಣಗೊಳಿಸಲು ಎಲ್ಲಾ ವಲಯ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ನಿಯಮಗಳ ಪಾಲನೆ, ವ್ಯಾಕ್ಸಿನೇಷನ್ ಹಾಗೂ ಟೆಸ್ಟಿಂಗ್ ಮಾಡುವ ಸಂಬಂಧ ಸಲಹೆ ಸೂಚನೆ ನೀಡಿದ್ದಾರೆ. ಆಶಾ ಕಾರ್ಯಕರ್ತೆಯರು ಲಸಿಕೆ ಪಡೆಯಲು ಅರ್ಹರಿರುವವರಿಗೆ ಅರಿವು ಮೂಡಿಸಿ ಲಸಿಕೆ ಪಡೆಯುವಂತೆ ಮಾಡಬೇಕು. ಜೊತೆಗೆ ವ್ಯಾಕ್ಸಿನೇಷನ್ ಸೈಟ್‌ಗಳಲ್ಲಿ ಲಸಿಕೆ ಪಡೆಯುವ ಸಂಖ್ಯೆಯನ್ನು ದ್ವಿಗುಣಗೊಳಿಸಲು ಕ್ರಮವಹಿಸಲು ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಅವಶ್ಯಕ ಲಸಿಕೆ ಲಭ್ಯವಿದ್ದು, ನಾಳೆ 2 ಲಕ್ಷ ಲಸಿಕೆ ಬರಲಿದೆ ಎಂದರು.

ಜೊತೆಗೆ ನಗರದಲ್ಲಿ ಕೋವಿಡ್ ನಿಯಮಗಳನ್ನು ಪಾಲಿಸದೆ ಹೆಚ್ಚು ಜನಸಂದಣಿಯಾಗುತ್ತದೆ ಎಂಬುದನ್ನು ಪರಿಶೀಲಿಸಿ ಸೀಲ್ ಮಾಡಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು. ಪಾಲಿಕೆ ವ್ಯಾಪ್ತಿಯಲ್ಲಿ ಯಾವ ಪ್ರದೇಶದಲ್ಲಿ ಹೆಚ್ಚು ಕೋವಿಡ್ ಪ್ರಕರಣಗಳು ಕಂಡುಬರುತ್ತಿವೆಯೋ ಅಲ್ಲಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಹೆಚ್ಚು ಹೆಚ್ಚು ಕೋವಿಡ್ ಪರೀಕ್ಷೆಗಳನ್ನು ಮಾಡಬೇಕು. ವಾರ್ಡ್ ಅಥವಾ ಪ್ರಾಥಮಿಕ ಆರೋಗ್ಯ ಕೇಂದ್ರದ ಮಟ್ಟದಲ್ಲಿ ಪರೀಕ್ಷೆ ಮಾಡುವ ಜೊತೆಗೆ ಅಪಾರ್ಟ್​ಮೆಂಟ್ಸ್ ಮಟ್ಟದಲ್ಲಿ ಮೈಕ್ರೋ ಲೆವೆಲ್​​ನಲ್ಲಿ ಪರೀಕ್ಷೆ ಮಾಡಿ ಪಾಸಿಟಿವಿಟಿ ರೇಟ್ ಗಮನಿಸಿ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಹೊರ ರಾಜ್ಯಗಳಾದ ಮಹಾರಾಷ್ಟ್ರ, ಪಂಜಾಬ್ ಹಾಗೂ ಕೇರಳದಲ್ಲಿ ಹೆಚ್ಚು ಕೋವಿಡ್ ಪ್ರಕರಣಗಳು ಕಂಡುಬರುತ್ತಿದ್ದು, ಹೊರ ರಾಜ್ಯಗಳಿಂದ ವಿಮಾನದ ಮೂಲಕ, ಬಸ್ ಹಾಗೂ ರೈಲಿನ ಮೂಲಕ ಬರುವವರ ಮೇಲೆ ನಿಗಾ ವಹಿಸಿ ಟೆಸ್ಟಿಂಗ್ ಹೆಚ್ಚಳ ಮಾಡಲಾಗುವುದು. ಅಲ್ಲದೆ ಹೊರ ರಾಜ್ಯಗಳಿಂದ ಬರುತ್ತಿರುವವರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಯಾರ‍್ಯಾರು ಹೊರಗಡೆಯಿಂದ ಬರುತ್ತಾರೆ ಅಂತವರನ್ನು ಸ್ವಯಂ ಐಸೋಲೇಟ್ ಮಾಡಿ ನಂತರ ಕೋವಿಡ್ ಪರೀಕ್ಷೆ ಮಾಡುವ ಬಗ್ಗೆ ಸಲಹೆ ಬಂದಿದ್ದು, ಆ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು. ಆದರೆ ಎಲ್ಲಾ ಹೊರ ರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ ನೆಗೆಟಿವ್ ರಿಪೋರ್ಟ್ ಕಡ್ಡಾಯ ಎಂದು ಈ ಹಿಂದೆ ಹೇಳಲಾಗಿತ್ತು. ಆದರೆ ಸಧ್ಯ ಇದನ್ನು ಜಾರಿ ಮಾಡಲಾಗಿಲ್ಲ ಎಂದರು.

ಖಾಸಗಿ ಆಸ್ಪತ್ರೆಗಳಲ್ಲಿ ಶೇ. 20 ಹಾಸಿಗೆ ಮೀಸಲಿಡಲು ಸೂಚನೆ:

ಬಿಬಿಎಂಪಿ ವ್ಯಾಪ್ತಿಯಲ್ಲಿ ಈ ಹಿಂದೆ ಕೋವಿಡ್ ಸೋಂಕಿತರಿಗಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಶೇ. 50ರಷ್ಟು ಹಾಸಿಗೆ ಮೀಸಲಿಡಲಾಗಿತ್ತು. ಇದೀಗ ನಗರದಲ್ಲಿ ಕ್ರಮೇಣ ಕೋವಿಡ್ ಸೋಂಕು ಹೆಚ್ಚಳವಾಗುತ್ತಿದ್ದು, ಅವಶ್ಯಕತೆಗೆ ಅನುಗುಣವಾಗಿ ಹಾಸಿಗೆಗಳನ್ನು ಮೀಸಲಿಡಬೇಕಿದೆ. ಈ ನಿಟ್ಟಿನಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಶೇ. 20ರಷ್ಟು ಹಾಸಿಗೆಗಳನ್ನು ಕೂಡಲೆ ಮೀಸಲಿಡಬೇಕು ಎಂದು ಮುಖ್ಯ ಆಯುಕ್ತ ಗೌರವ್ ಗುಪ್ತಾ ಖಾಸಗಿ ಆಸ್ಪತ್ರೆಗಳಿಗೆ ಸೂಚನೆ ನೀಡಿದರು.

ABOUT THE AUTHOR

...view details