ಬೆಂಗಳೂರು:ಎಫ್ಎಸ್ಎಸ್ಎಐ ಪ್ರಮಾಣ ಪತ್ರವಿಲ್ಲದೇ ಆಹಾರ ಪದಾರ್ಥಗಳನ್ನು ಮಾರಾಟ ಮಾಡಲು ಅನುಮತಿ ನೀಡಲಾಗುವುದಿಲ್ಲ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಎಚ್ಚರಿಸಿದೆ.
ಮಹಾನಗರ ಪಾಲಿಕೆಯ ರಾಜರಾಜೇಶ್ವರಿ ನಗರ ವಲಯದ ರಾಜರಾಜೇಶ್ವರಿ ನಗರದ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ 9ವಾರ್ಡ್ಗಳು ಹಾಗೂ ಯಶವಂತಪುರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ 5 ವಾರ್ಡ್ ಗಳಲ್ಲಿ ಆಹಾರ ಪದಾರ್ಥಗಳನ್ನು ಮಾರಾಟ ಮಾಡುವ ಬೀದಿಬದಿ ವ್ಯಾಪಾರಿಗಳು, ತಾವು ತಯಾರಿಸಿ ಮಾರಾಟ ಮಾಡುವ ಆಹಾರ ಪದಾರ್ಥಗಳು ಸುರಕ್ಷತೆಯಿಂದ, ಸ್ವಚ್ಛತೆಯಿಂದ ಮತ್ತು ಗುಣಮಟ್ಟದಿಂದ ಸಾರ್ವಜನಿಕರಿಗೆ ಮಾರಾಟ ಮಾಡುವುದು ಸಾರ್ವಜನಿಕ ಆರೋಗ್ಯ ದೃಷ್ಟಿಯಿಂದ ಅತ್ಯವಶ್ಯವಾಗಿರುತ್ತದೆ ಎಂದು ಬಿಬಿಎಂಪಿ ಪ್ರಕಟಣೆಯಲ್ಲಿ ತಿಳಿಸಿದೆ.