ಬೆಂಗಳೂರು:ಸರ್ಕಾರ ಮೂರನೇ ಹಂತದ ಲಾಕ್ಡೌನ್ ಸಡಿಲಿಕೆ ಮಾಡಿದ್ದಲ್ಲಿ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲು ಬಿಬಿಎಂಪಿ ಈಗಾಗಲೇ ತಯಾರಿ ಮಾಡಿಕೊಂಡಿದೆ ಎಂದು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ತಿಳಿಸಿದ್ದಾರೆ.
ಲಾಕ್ಡೌನ್ ಸಡಿಲಿಕೆಯಾದರೆ ಕೊರೊನಾ ನಿಯಂತ್ರಣಕ್ಕೆ ಬಿಬಿಎಂಪಿ ಸಿದ್ಧವಿದೆ: ಬಿಬಿಎಂಪಿ ಆಯುಕ್ತ - Bangalore Corona Control
ಬೆಂಗಳೂರಿನಲ್ಲಿ ಪ್ರತಿದಿನ ಕೊರೊನಾ ಪ್ರಕರಣಗಳು ವರದಿಯಾಗುತ್ತಿವೆ. ಒಂದು ವೇಳೆ ಸರ್ಕಾರ ಮೂರನೇ ಹಂತದ ಲಾಕ್ಡೌನ್ ಸಡಿಲಿಕೆ ಮಾಡಿದ್ದಲ್ಲಿ ಕೊರೊನಾ ನಿಯಂತ್ರಣಕ್ಕೆ ಬೇಕಾದ ಮುಂಜಾಗ್ರತಾ ಕ್ರಮ ಕೈಗೊಳ್ಳಲು ನಾವು ಸಿದ್ಧರಿದ್ದೇವೆ ಎಂದು ಬಿಬಿಎಂಪಿ ಆಯುಕ್ತ ಅನಿಲ್ಕುಮಾರ್ ತಿಳಿಸಿದ್ದಾರೆ.
ಲಾಕ್ ಡೌನ್ ಸಡಿಲಿಕೆಯಾದರೆ ಕೊರೊನಾ ನಿಯಂತ್ರಣಕ್ಕೆ ಬಿಬಿಎಂಪಿ ಸಿದ್ಧವಿದೆ: ಬಿಬಿಎಂಪಿ ಆಯುಕ್ತ
ಮೇ 17 ರಂದು ಮೂರನೇ ಹಂತದ ಲಾಕ್ಡೌನ್ ಮುಗಿಯಲಿದ್ದು, ಒಂದು ವೇಳೆ ಸರ್ಕಾರ ಲಾಕ್ಡೌನ್ ಸಡಿಲಿಕೆ ಮಾಡಿದ್ದಲ್ಲಿ ಕೊರೊನಾ ನಿಯಂತ್ರಣಕ್ಕೆ ಬೇಕಾದ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ನಾವು ತಯಾರಿದ್ದೇವೆ. ಆದ್ದರಿಂದ ಸರ್ಕಾರದ ಆದೇಶಕ್ಕಾಗಿ ಕಾಯುತ್ತಿದ್ದೇವೆ ಎಂದು ಅನಿಲ್ ಕುಮಾರ್ ಹೇಳಿದ್ದಾರೆ.
ಇನ್ನು ಬೆಂಗಳೂರಿಗೆ ಹೊರದೇಶ, ಹೊರರಾಜ್ಯಗಳಿಂದ ಬರುತ್ತಿರುವ ಪ್ರತಿಯೊಬ್ಬರ ಆರೋಗ್ಯ ತಪಾಸಣೆ ಮಾಡಿ ಕ್ವಾರಂಟೈನ್ನಲ್ಲಿ ಇಟ್ಟಿದ್ದೇವೆ ಎಂದು ಬಿಬಿಎಂಪಿ ಆಯುಕ್ತರು ಹೇಳಿದ್ದಾರೆ.