ಬೆಂಗಳೂರು: ಬೃಹತ್ ಬೆಂಗಳೂರು ನಗರ ಪಾಲಿಕೆಯಲ್ಲಿ ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದ ಅಡಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ಯಾರಾ ಮೆಡಿಕಲ್, ವರ್ಕರ್ ಮತ್ತು ಸೈಕಿಯಾಟ್ರಿಕ್ ನಸರ್ಸ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಂದು ವರ್ಷದ ಗುತ್ತಿಗೆ ಆಧಾರದ ಮೇಲೆ ಈ ನೇಮಕಾತಿ ನಡೆಸಲಾಗುತ್ತಿದ್ದು, ಸೂಕ್ತ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಯಾವುದೇ ಲಿಖಿತ ಪರೀಕ್ಷೆ ನಡೆಸದೇ ವಾಕ್ ಇನ್ ಇಂಟರ್ವ್ಯೂ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಒಟ್ಟು 46 ಹುದ್ದೆಗಳು ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ
ಯಾರು ಅರ್ಜಿ ಸಲ್ಲಿಸಬಹುದು: ನರ್ಸ್ ಹೊರತಾಗಿ ಆಶಾ ಕಾರ್ಯಕರ್ತರು, ಅಕೌಂಟ್ ಮ್ಯಾನೇಜರ್, ಜಿಲ್ಲಾ ಸಮಾಲೋಚಕರು, ಜೋನಲ್ ಅಕೌಂಟ್ ಮ್ಯಾನೇಜರ್, ಡೆಂಟಿಸ್ಟ್ ಸೇರಿದಂತೆ ವಿವಿಧ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಬಿಎಸ್ಸಿ, ಪದವಿ, ಎಂಎಸ್ಡಬ್ಯೂ, ಎಂಬಿಬಿಎಸ್, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಪದವೀಧರರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳ ವಯೋಮಿತಿ ಗರಿಷ್ಟ 35 ವರ್ಷ ಮೀರಿರಬಾರದು. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ವೇತನ: ಆಯಾ ಹುದ್ದೆಗಳಿಗೆ ತಕ್ಕಂತೆ ನಿರ್ದಿಷ್ಟ ವೇತನವನ್ನು ನಿಗದಿ ಮಾಡಲಾಗಿದ್ದು, ಕನಿಷ್ಟ 14 ಸಾವಿರದಿಂದ ಗರಿಷ್ಟ 50 ಸಾವಿರದವರೆಗೆ ವೇತನ ನಿಗದಿ ಮಾಡಲಾಗಿದೆ. ಈ ಕುರಿತಾದ ಸಂಪೂರ್ಣ ಮಾಹಿತಿಯನ್ನು ಪ್ರಕಟಣೆಯಲ್ಲಿ ಕಾಣಬಹುದಾಗಿದೆ.