ಬೆಂಗಳೂರು: ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಎಲ್ಲ ಮಾಹಿತಿಯನ್ನು ಒಳಗೊಂಡ ಆ್ಯಪ್ ಅನ್ನು ಬಿಬಿಎಂಪಿ ಯಿಂದ ಡಿಸಿಎಂ ಅಶ್ವಥ್ ನಾರಾಯಣ್ ಇಂದು ಬಿಡುಗಡೆ ಮಾಡಿದರು.
ಕೋವಿಡ್ ಆಸ್ಪತ್ರೆಗಳ ಹಾಸಿಗೆ ನಿರ್ವಹಣಾ ವ್ಯವಸ್ಥೆ ಆ್ಯಪ್ ಹಾಗೂ ಕೋವಿಡ್ ಪಿ.ಹೆಚ್.ಸಿ ಆ್ಯಪ್ ಬಿಡುಗಡೆ ಮಾಡಲಾಯಿತು. ಕೋವಿಡ್ ಪಿ.ಹೆಚ್.ಸಿ ಆ್ಯಪ್ನಲ್ಲಿ ಯಾವ ಆಸ್ಪತ್ರೆಯಲ್ಲಿ ಎಷ್ಟು ಹಾಸಿಗೆ ಇದೆ. ಪ್ರಾಥಮಿಕ ಆರೋಗ್ಯ ಕೇಂದ್ರ ಎಲ್ಲಿದೆ ಎಂಬ ಮಾಹಿತಿ ಲಭ್ಯವಾಗಲಿದೆ. ಜೊತೆಗೆ ಕೋವಿಡ್ ಸಂಪರ್ಕಿತರ ಮಾಹಿತಿ ಪತ್ತೆ ಹಂಚುವಿಕೆ, ಕಂಟೇನ್ಮೆಂಟ್ ವಲಯ ನಿರ್ವಹಣೆ, ಜ್ವರ ತಪಾಸಣಾ ಕೇಂದ್ರಗಳ ನಿರ್ವಹಣೆ, ಗಂಟಲು ದ್ರವ ಮಾದರಿ ಪರೀಕ್ಷೆ ಮಾಹಿತಿಗಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ ಪಡೆದು, ಸಮಗ್ರ ವರದಿಯನ್ನು ನಿತ್ಯ ಪ್ರಚಾರ ಪಡಿಸಲು ಕ್ರಮ ಕೈಗೊಳ್ಳಲಾಗಿದೆ.
ಕೋವಿಡ್ ಪ್ರಕರಣಗಳನ್ನು ತ್ವರಿತವಾಗಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಅಡಿ ದಾಖಲಿಸಲು "ಕೋವಿಡ್ ಹಾಸ್ಪಿಟಲ್ ಬೆಡ್ ಮ್ಯಾನೇಜ್ಮೆಂಟ್ ಸಿಸ್ಟಂ" ಸಿ ಹೆಚ್ ಬಿ ಎಂ ಎಸ್ ಎಂಬ ತಂತ್ರಾಂಶ ಅಭಿವೃದ್ಧಿ ಮಾಡಲಾಗಿದೆ.