ಬೆಂಗಳೂರು:ಲಾಕ್ಡೌನ್ ಹಿನ್ನೆಲೆ ಸಣ್ಣಪುಟ್ಟ ರೈತರೂ ಸೇರಿದಂತೆ ಕೆ.ಆರ್ ಮಾರುಕಟ್ಟೆ ವ್ಯಾಪಾರಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೆ.ಆರ್ ಮಾರುಕಟ್ಟೆಯ ವ್ಯಾಪಾರ ವಹಿವಾಟಿಗೆ ಇನ್ನೂ ಅನುಮತಿ ಸಿಕ್ಕಿಲ್ಲ. ಆದರೆ, ಆಯುಕ್ತರು ಸೇರಿದಂತೆ ಪಾಲಿಕೆ ಅಧಿಕಾರಿಗಳು ಕೆಆರ್ ಮಾರುಕಟ್ಟೆಗೆ ಭೇಟಿ ನೀಡಿ ಸ್ವಚ್ಛತೆ ಪರಿಶೀಲನೆ ನಡೆಸಿದ್ದಾರೆ.
ಕೆಆರ್ ಮಾರ್ಕೆಟ್ನಲ್ಲಿ ಭರದಿಂದ ಸಾಗಿದ ಕ್ಲೀನಿಂಗ್: ನಾಳೆಯಿಂದ ವ್ಯಾಪಾರ ಆರಂಭ ಸಾಧ್ಯತೆ
ನಾಳೆಯಿಂದ ಕೆ.ಆರ್. ಮಾರುಕಟ್ಟೆ ಆರಂಭವಾಗುವ ಸಾಧ್ಯತೆ ಇದ್ದು, ಮಾರುಕಟ್ಟೆಯಲ್ಲಿ ಸ್ವಚ್ಚತಾ ಕಾರ್ಯ ಭರದಿಂದ ಸಾಗಿದೆ.
ಇಂದೂ ಕೂಡಾ ಸ್ವಚ್ಛತಾ ಕಾರ್ಯ ಭರದಿಂದ ಸಾಗಿದೆ. ವ್ಯಾಪಾರ ವಹಿವಾಟು ಬುಧವಾರದಿಂದ ಸಂಪೂರ್ಣವಾಗಿ ಆರಂಭವಾಗುವ ಸಾಧ್ಯತೆ ಇದೆ. ಆದರೂ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೆಲವು ಮಳಿಗೆಗಳ ವ್ಯಾಪಾರಿಗಳಿಗೆ ಮಾತ್ರ ವ್ಯಾಪಾರ ವಹಿವಾಟು ನಡೆಸಲು ಅವಕಾಶ ನೀಡಬಹುದಾಗಿದ್ದು, ಬೀದಿ ಬದಿ ,ಫುಟ್ ಪಾತ್ ವ್ಯಾಪಾರಿಗಳಿಗೆ ಅನುಮತಿ ಸಿಗುವುದು ಅನುಮಾನ ಎನ್ನಲಾಗುತ್ತಿದೆ.
ಹೂವಿನ ವ್ಯಾಪಾರಿಗಳು ನಷ್ಟದಿಂದ ಕಂಗೆಟ್ಟಿದ್ದು, ಮಾರುಕಟ್ಟೆ ತೆರೆಯಲು ಒತ್ತಾಯಿಸುತ್ತಿದ್ದಾರೆ. ಬುಧವಾರದಿಂದ ಹೂವು, ಹಣ್ಣು, ತರಕಾರಿ ವ್ಯಾಪಾರ - ವಹಿವಾಟುಗಳಿಗೆ ಗ್ರೀನ್ ಸಿಗ್ನಲ್ ಸಿಗುವ ಸಾಧ್ಯತೆ ಇದೆ.