ಬೆಂಗಳೂರು: ರಾಜ್ಯ ಸರ್ಕಾರ ಕೊರೊನಾ ಮುಂಚೂಣಿ ಕಾರ್ಯಕರ್ತರು ಎಂದು ಗುರುತಿಸಿರುವವರಿಗೆ ವಿವಿಧ ಗುಂಪುಗಳಲ್ಲಿ ಲಸಿಕೆ ಹಾಕುವ ಕಾರ್ಯಕ್ರಮವನ್ನು ಬಿಬಿಎಂಪಿ ಆರಂಭಿಸಿದೆ.
45 ವರ್ಷ ಮೇಲ್ಪಟ್ಟ ವಯೋಮಾನದ ಎಲ್ಲ ಫಲಾನುಭವಿಗಳಿಗೆ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮಾತ್ರ ಲಸಿಕೆ ನೀಡಲಾಗುತ್ತದೆ. ಭಾರತ ಸರ್ಕಾರವು ಅನುಬಂಧ-2ರ ಪ್ರಕಾರ ಎಲ್ಲ ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕೆಲಸಗಾರರಿಗೆ(ವೆಬ್‌ಲಿಂಕ್: https://www.mohfw.gov.in/pdf/COVID19VaccineOG111Chapter16.pdf) ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮಾತ್ರ ಲಸಿಕೆ ನೀಡಲಾಗುತ್ತದೆ.
150 ಮೊಬೈಲ್ ಲಸಿಕಾ ಕೇಂದ್ರ ಸ್ಥಾಪನೆ 18-44 ವರ್ಷ ವಯೋಮಾನದ ಮೂಂಚೂಣಿ ಕಾರ್ಯಕರ್ತರಿಗೆ 150 ಮೊಬೈಲ್ ಲಸಿಕಾ ಕೇಂದ್ರ ಸ್ಥಾಪನೆ18 ರಿಂದ 44 ವರ್ಷ ವಯಸ್ಸಿನ ಮುಂಚೂಣಿ ಕಾರ್ಯಕರ್ತರಿಗೆ, ಬಿಬಿಎಂಪಿಯ ಎಲ್ಲಾ 8 ವಲಯಗಳಲ್ಲಿ ಸುಮಾರು 150 ಮೊಬೈಲ್ ವ್ಯಾಕ್ಸಿನೇಷನ್ ತಂಡಗಳನ್ನು ರಚಿಸಲಾಗಿದೆ. ರಾಜ್ಯ ಸರ್ಕಾರ ಗುರುತಿಸಿರುವ ಕೊರೊನಾ ಮುಂಚೂಣಿ ಕಾರ್ಯಕರ್ತರ ವಿಭಾಗದಲ್ಲಿ 18-44 ವರ್ಷ ವಯಸ್ಸಿನ ಲಸಿಕೆ ನೀಡಲು ಈ ತಂಡಗಳನ್ನು ಪ್ರತ್ಯೇಕವಾಗಿ ರಚಿಸಲಾಗಿದೆ.ರಾಜ್ಯ ಸರ್ಕಾರ ಗುರುತಿಸಿರುವ ಕೊರೊನಾ ಮುಂಚೂಣಿ ಕಾರ್ಯಕರ್ತರು1. ಅಂಗವೈಕಲ್ಯ ಹೊಂದಿರುವ (ಮಾನಸಿಕ ಅಸ್ವಸ್ಥತೆ ಸೇರಿದಂತೆ) ಫಲಾನುಭವಿಗಳು ಮತ್ತು ಒಬ್ಬ ಆರೈಕೆದಾರರು.2. ಖೈದಿಗಳು ಚಿತಾಗಾರ / ಸ್ಮಶಾನ / ರುದ್ರಭೂಮಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ ಹಾಗೂ ಸ್ವಸಹಾಯಕರು.3. ಆರೋಗ್ಯ ಕಾರ್ಯಕರ್ತರ ನಿಕಟ ಕುಟುಂಬಸ್ಥರು.4. ಕೋವಿಡ್-19 ಕರ್ತವ್ಯಕ್ಕೆ ನಿಯೋಜಿಸಲಾದ ಶಿಕ್ಷಕರು.5. ಸರ್ಕಾರಿ ಸಾರಿಗೆ ಸಿಬ್ಬಂದಿ.6. ಆಟೋ ಮತ್ತು ಕ್ಯಾಬ್ ಚಾಲಕರು.7. ವಿದ್ಯುತ್ ಮತ್ತು ನೀರು ಸರಬರಾಜು ಮಾಡುವವರು.8. ಅಂಚೆ ಇಲಾಖೆಯ ಸಿಬ್ಬಂದಿಗಳು.9. ಬೀದಿ ಬದಿಯ ವ್ಯಾಪಾರ ಮಾಡುವವರು.10. ಭದ್ರತೆ ಮತ್ತು ಕಛೇರಿಗಳ ಹೌಸ್ ಕೀಪಿಂಗ್ ಸಿಬ್ಬಂದಿಗಳು. 11. ನ್ಯಾಯಾಂಗ ಅಧಿಕಾರಿಗಳು. 12. ವಯೋವೃದ್ಧರ/ತೀವ್ರ ಅನಾರೋಗ್ಯದಿಂದ ಬಳಲುತ್ತಿರುವವರ ಆರೈಕೆದಾರರು.13. ಮಕ್ಕಳ ಸಂರಕ್ಷಣಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ. 14. ಮಾದ್ಯಮದವರು.15. ಆಸ್ಪತ್ರೆಗಳಿಗೆ ಸರಕು ಸರಬರಾಜು ಮಾಡುವ ವ್ಯಕ್ತಿಗಳು. 16. ಆಯಿಲ್ ಇಂಡಸ್ಟ್ರಿ ಮತ್ತು ಗ್ಯಾಸ್ ಸರಬರಾಜು ಮಾಡುವವರು(ಪೆಟ್ರೋಲ್ ಬಂಕ್, ಕರ್ಮಚಾರಿ ಒಳಗೊಂಡಂತೆ).17. ಔಷದಿ ತಯಾರಿಸುವ ಕಂಪನಿಯ ಸಿಬ್ಬಂದಿಗಳು. 18. ಆಸ್ಪತ್ರೆಗಳಿಗೆ ಆಕ್ಸಿಜನ್, ಔಷಧಿಗಳು ಮತ್ತು ವೈದ್ಯಕೀಯ ಉಪಕರಣಗಳನ್ನು ಸರಬರಾಜು ಮಾಡುವ ಸಿಬ್ಬಂದಿಗಳು.19. ಅಧಿಕೃತ ಗುರುತಿನ ಚೀಟಿ ಹೊಂದಿರದ ಫಲಾನುಭವಿಗಳು(ಉದಾಹರಣೆ: ವೃದ್ಧಾಶ್ರಮ ವಾಸಿಗಳು, ನಿರ್ಗತಿಕರು) 20. ಭಾರತೀಯ ಆಹಾರ ನಿಗಮ ಸಿಬ್ಬಂದಿಗಳು. 21. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ(ಎ.ಪಿ.ಎಂ.ಸಿ.) ಕೆಲಸಗಾರರು.ಈ ವರ್ಗದವರನ್ನು ಹೊರತು ಪಡಿಸಿ ಯಾವುದೇ ಕ್ಷೇತ್ರದಲ್ಲಿರುವವರಿಗೆ ಸದ್ಯದಲ್ಲಿ ಲಸಿಕೆ ನೀಡಲಾಗುವುದಿಲ್ಲ ಎಂದು ಬಿಬಿಎಂಪಿ ತಿಳಿಸಿದೆ.