ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಾರ್ಡ್ ಪುನರ್ ವಿಂಗಡಣೆ ಮಾಡುವ ಕಾಲಮಿತಿಯನ್ನು ರಾಜ್ಯ ಸರ್ಕಾರ ವಿಸ್ತರಣೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿರುವ 198 ವಾರ್ಡ್ಗಳನ್ನು 243 ವಾರ್ಡ್ಗಳಿಗೆ ಹೆಚ್ಚಿಸಿ ಪುನರ್ ವಿಂಗಡಣೆ ಮಾಡಲು ಸಮಿತಿ ರಚಿಸಿ ಸರ್ಕಾರ ಆರು ತಿಂಗಳ ಅವಧಿಯನ್ನು ನಿಗದಿಪಡಿಸಿತ್ತು. ಆದರೆ ಕೋವಿಡ್ ನಿಯಂತ್ರಿಸಲು ಬಿಬಿಎಂಪಿ ಕಾರ್ಯಪ್ರವೃತ್ತವಾಗಿದ್ದ ಹಿನ್ನೆಲೆಯಲ್ಲಿ ಸಮಿತಿಗೆ ನಿಗದಿಪಡಿಸಿದ ಅವಧಿಯಲ್ಲಿ ವಾರ್ಡ್‌ಗಳ ಪುನರ್ ವಿಂಗಡಣಾ ಕಾರ್ಯ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ.
ಹೀಗಾಗಿ ಬಿಬಿಎಂಪಿ ಮುಖ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ ರಚಿಸಿರುವ ಸಮಿತಿಯ ಅವಧಿಯನ್ನು ನಗರಾಭಿವೃದ್ಧಿ ಇಲಾಖೆಯು 2021ರ ಜುಲೈ 28ರಿಂದ ಆರು ತಿಂಗಳವರೆಗೆ ವಿಸ್ತರಿಸಿದೆ. ಹಾಗಾಗಿ ಸಮಿತಿ 2020ರ ಜ.28ರವರೆಗೆ ಅಸ್ತಿತ್ವದಲ್ಲಿರಲಿದ್ದು, ಅಷ್ಟರೊಳಗೆ ಬಿಬಿಎಂಪಿ ವ್ಯಾಪ್ತಿಗೆ ಗಡಿಯಂಚಿನ ಗ್ರಾಮಗಳ ಸೇರ್ಪಡೆ ಹಾಗೂ ವಾರ್ಡ್‌ಗಳ ಮರುವಿಂಗಡಣೆ ಬಗ್ಗೆ ಸರ್ಕಾರಕ್ಕೆ ಶಿಫಾರಸು ಮಾಡಬೇಕಿದೆ.