ಬೆಂಗಳೂರು:ಬಿಬಿಎಂಪಿ ವಾರ್ಡ್ಗಳ ಮೀಸಲಾತಿಯನ್ನು ಬಿಜೆಪಿ ಹಾಗೂ ಅವರ ಕಾರ್ಯಕರ್ತರಿಗೆ ಅನುಕೂಲವಾಗುವಂತೆ ಪ್ರಕಟಿಸಲಾಗಿದೆ. ಬಿಜೆಪಿನೇ ಮೋಸ, ಬಿಜೆಪಿಗೆ ಮತ್ತೊಂದು ಹೆಸರೇ ಮೋಸ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದರು.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಬಿಎಂಪಿ ಚುನಾವಣೆಗೆ ನಾವು ಸಿದ್ದವಾಗಿದ್ದೇವೆ. ಆದರೆ, ಬಿಬಿಎಂಪಿ ಮೀಸಲಾತಿ ಪ್ರಕಟಣೆಯಲ್ಲಿ ಸಾಮಾಜಿಕ ನ್ಯಾಯಕ್ಕೆ ಅನ್ಯಾಯ ಮಾಡಿದ್ದಾರೆ. ಅಲ್ಲದೇ, ಮಹಿಳೆಯರಿಗೂ ಅನ್ಯಾಯ ಮಾಡಿದ್ದಾರೆ. ನಮ್ಮ ಪಕ್ಷದ ನಾಯಕರಿಗೆ ಅವಕಾಶ ತಪ್ಪಿಸುವ ಹುನ್ನಾರವಿದು ಎಂದು ಕಿಡಿಕಾರಿದರು.