ಕರ್ನಾಟಕ

karnataka

ETV Bharat / state

ಮಳೆಯಿಂದ ಸಂಕಷ್ಟಕ್ಕೀಡಾದ ಜನರಿಗೆ ಕ್ಷಿಪ್ರವಾಗಿ ಸ್ಪಂದಿಸಲು ಸಚಿವ ಬಿ.ಸಿ.ನಾಗೇಶ್ ಸೂಚನೆ - BC Nagesh suggested to take appropriate action to Kodagu district administration

ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಸಂಕಷ್ಟಕ್ಕೀಡಾದ ನಾಗರಿಕರಿಗೆ ಕ್ಷಿಪ್ರವಾಗಿ ಸ್ಪಂದಿಸಲು ಕೊಡಗು ಜಿಲ್ಲಾಡಳಿತಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್ ಸೂಚಿಸಿದ್ದಾರೆ. ನಾಗರಿಕರಿಗೆ ಬೇಕಾದ ಅಗತ್ಯ ನೆರವುಗಳನ್ನು ಮತ್ತು ಸೂಕ್ತ ಪರಿಹಾರನ್ನು ನೀಡಲು ಕ್ರಮಕೈಗೊಳ್ಳುವಂತೆ ಅವರು ಇದೇ ವೇಳೆ ಹೇಳಿದ್ದಾರೆ.

bc-nagesh-instructed-to-district-administration-respond-quickly-to-the-people-affected-by-the-rain
ಮಳೆಯಿಂದ ಸಂಕಷ್ಟಕ್ಕೀಡಾದ ಜನರಿಗೆ ಕ್ಷಿಪ್ರವಾಗಿ ಸ್ಪಂದಿಸಲು ಸಚಿವ ಬಿ.ಸಿ.ನಾಗೇಶ್ ನಿರ್ದೇಶನ

By

Published : Jul 16, 2022, 11:04 PM IST

ಬೆಂಗಳೂರು: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರೆದಿರುವ ಹಿನ್ನೆಲೆಯಲ್ಲಿ ನಾಗರಿಕರ ಸುರಕ್ಷತೆ ಮತ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಜೊತೆಗೆ ನಾಗರಿಕರಿಂದ ನೆರವು ಕೋರಿ ಕರೆಗಳು ಬಂದಾಗ ಕ್ಷಿಪ್ರವಾಗಿ ಸ್ಪಂದಿಸಲು ಸದಾ ಸಿದ್ಧರಾಗಿರಬೇಕು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್ ಕೊಡಗು ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದ್ದಾರೆ.

ಬೆಂಗಳೂರಿನ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಿಂದ ಕೊಡಗು ಜಿಲ್ಲಾಡಳಿತದೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಅವರು, ಮಳೆ, ಹವಾಮಾನ ಇಲಾಖೆ ಮುನ್ಸೂಚನೆ, ಪ್ರವಾಹ ಪರಿಸ್ಥಿತಿ, ಜಲಾಶಯ ನೀರಿನ ಮಟ್ಟ, ಒಳ ಹರಿವು ಮತ್ತು ಹೊರ ಹರಿವು, ಮನೆಯಿಂದ ಆಗಿರುವ ಹಾನಿ, ಕಾಳಜಿ ಕೇಂದ್ರಗಳ ಸ್ಥಾಪನೆ, ಅಲ್ಲಿರುವ ನಾಗರಿಕರಿಗೆ ನೀಡಿರುವ ಸೌಕರ್ಯಗಳ ಕುರಿತು ಮಾಹಿತಿ ಪಡೆದುಕೊಂಡರು. ಮಳೆಯಿಂದ ಜಲಾವೃತ ಪ್ರದೇಶಗಳು ಮತ್ತು ಮಣ್ಣು ಕುಸಿಯುವ ಸಾಧ್ಯತೆ ಇರುವ ಬೆಟ್ಟ ಪ್ರದೇಶಗಳಲ್ಲಿನ ಮನೆಗಳಲ್ಲಿ ವಾಸವಿರುವ ನಾಗರಿಕರನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಗೊಳಿಸಲು ಕ್ರಮ ಕೈಗೊಳ್ಳಬೇಕು. ಕಾಳಜಿ ಕೇಂದ್ರಗಳಲ್ಲಿರುವ 600ಕ್ಕೂ ಹೆಚ್ಚು ನಾಗರೀಕರಿಗೆ ಅಗತ್ಯ ವಸ್ತುಗಳು, ಆಹಾರ, ವೈದ್ಯಕೀಯ ನೆರವು, ಚಿಕಿತ್ಸೆ ನೀಡಬೇಕು. ಕಾಳಜಿ ಕೇಂದ್ರದ ಬದಲು ತಮ್ಮ ಸಂಬಂಧಿಕರ ಮನೆಗಳಲ್ಲಿ ಇರುವವರಿಗೂ ಫುಡ್ ಕಿಟ್ ವಿತರಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಮಣ್ಣು ಕುಸಿಯುವ ಸಾಧ್ಯತೆ ಇರುವ ರಸ್ತೆಗಳಲ್ಲಿ ಸಂಚಾರಕ್ಕೆ ಅವಕಾಶ ಕೊಡಬೇಡಿ:ಮಣ್ಣು ಕುಸಿತ ಸಾಧ್ಯತೆ ಇರುವ ರಸ್ತೆಗಳಲ್ಲಿ ಭಾರಿ ವಾಹನ ಸಂಚಾರಕ್ಕೆ ಅವಕಾಶ ನೀಡದೆ ತಾತ್ಕಾಲಿಕವಾಗಿ ಪರ್ಯಾಯ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು. ಗಾಳಿ, ಮಳೆಯಿಂದಾಗಿ ಮರಗಳು ವಿದ್ಯುತ್ ಕಂಬಗಳ ಮೇಲೆ ಬಿದ್ದು, ಕಂಬಗಳು ಮುರಿದು ಬಿದ್ದು ವಿದ್ಯುತ್ ಸಂಪರ್ಕ ಸ್ಥಗಿತದ ಪ್ರಕರಣಗಳು ಹೆಚ್ಚಾಗಿ ವರದಿಯಾಗಿವೆ. ವಿದ್ಯುತ್ ಸಮಸ್ಯೆ ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ತ್ವರಿತವಾಗಿ ವಿದ್ಯುತ್ ಕಂಬಗಳನ್ನು ಹೊಸದಾಗಿ ಅಳವಡಿಸುವ ಮೂಲಕ ಆದಷ್ಟು ಬೇಗ ವಿದ್ಯುತ್ ಸಂಪರ್ಕ ಮರು ಸ್ಥಾಪಿಸಬೇಕು ಎಂದು ತಿಳಿಸಿದರು.

ಮಳೆಯಿಂದ ಬಿದ್ದಿರುವ ಭಾಗಶಃ ಹಾನಿಯಾಗಿರುವ ಮನೆಗಳ ಮಾಲೀಕರಿಗೆ ತ್ವರಿತಗತಿಯಲ್ಲಿ ಪರಿಹಾರ ಒದಗಿಸಬೇಕು. ಹೆಚ್ಚಿನ ಹಾನಿ ಸಂಭವಿಸಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ತ್ವರಿತವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಲು ಸಚಿವರು ಸೂಚನೆ ನೀಡಿದರು. ಮಳೆ, ಗಾಳಿ, ಚಳಿಯಿಂದ ರೋಗಗಳು ಹರಡುವ ಸಾಧ್ಯತೆ ಇರುವ ಕಾರಣ ಆರೋಗ್ಯ ತಪಾಸಣೆ, ಅಗತ್ಯ ಚಿಕಿತ್ಸೆ ನೀಡಬೇಕು. ಮುನ್ನೆಚ್ಚರಿಕೆ ಕ್ರಮಗಳ ಕುರಿತು ನಾಗರಿಕರಿಗೆ ಮಾಧ್ಯಮಗಳು, ಜಾಲತಾಣಗಳು ಹಾಗೂ ಇನ್ನಿತರ ಮಾಧ್ಯಮಗಳ ಮೂಲಕ ಮಾಹಿತಿ ನೀಡುವಂತೆ ಸಚಿವ ನಾಗೇಶ್ ಅವರು ಜಿಲ್ಲಾಡಳಿತಕ್ಕೆ ಸೂಚಿಸಿದರು.

ಓದಿ :ಸೆಲ್ಫಿ ತೆಗೆದುಕೊಳ್ಳುವಾಗ ಹೆಚ್ಚಿದ ನೀರು, ನಡುನೀರಲ್ಲಿ ಸಿಲುಕಿದ ವಿದ್ಯಾರ್ಥಿಗಳು ... ವಿಡಿಯೋ

For All Latest Updates

TAGGED:

ABOUT THE AUTHOR

...view details