ಕರ್ನಾಟಕ

karnataka

ETV Bharat / state

ಹೈಕಮಾಂಡ್​ಗೆ ಈಶ್ವರಪ್ಪ ದೂರು ನೀಡಿದ್ದು ಶೋಭೆ ತರುವಂತಹದಲ್ಲ- ಬಿ.ಸಿ. ಪಾಟೀಲ್ ಬೇಸರ​​

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಿರಿಯ ಸಚಿವರಾದ ಕೆ.ಎಸ್. ಈಶ್ವರಪ್ಪನವರು ಮುಖ್ಯಮಂತ್ರಿಗಳ ಕಾರ್ಯವೈಖರಿಯ ಬಗ್ಗೆ ಮತ್ತು ಹಣವನ್ನು ಮಂಜೂರು ಮಾಡಿರುವ ಬಗ್ಗೆ ನೇರವಾಗಿ ರಾಜ್ಯಪಾಲರಿಗೆ ದೂರನ್ನು ಸಲ್ಲಿಸಿರುವುದು ಸರಿಯಾದ ಕ್ರಮ ಅಲ್ಲ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಪ್ರಕಟಣೆ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ.

B.C. Patil speak aganist the minister Eshwarappa
ಈಶ್ವರಪ್ಪ ವಿರುದ್ಧ ಬೇಸರ ವ್ಯಕ್ತಪಡಿಸಿದ ಬಿ.ಸಿ. ಪಾಟೀಲ್​​

By

Published : Apr 1, 2021, 2:03 PM IST

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿರುದ್ಧ ದೂರು ನೀಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ಕಾರ್ಯವೈಖರಿ ಬಗ್ಗೆ ಕೃಷಿ ಸಚಿವ ಬಿ.ಸಿ. ಪಾಟೀಲ್ ಬೇಸರ ವ್ಯಕ್ತಪಡಿಸಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಿರಿಯ ಸಚಿವರಾದ ಕೆ.ಎಸ್. ಈಶ್ವರಪ್ಪನವರು ಮುಖ್ಯಮಂತ್ರಿಗಳ ಕಾರ್ಯವೈಖರಿಯ ಬಗ್ಗೆ ಮತ್ತು ಹಣವನ್ನು ಮಂಜೂರು ಮಾಡಿರುವ ಬಗ್ಗೆ ನೇರವಾಗಿ ರಾಜ್ಯಪಾಲರಿಗೆ ದೂರನ್ನು ಸಲ್ಲಿಸಿರುವುದು ಸರಿಯಾದ ಕ್ರಮ ಅಲ್ಲ ಎಂದರು.

ಓದಿ:ರಾಜ್ಯಪಾಲರಿಗೆ ಪತ್ರ ವಿಚಾರಕ್ಕೆ ಅಷ್ಟೊಂದು ಮಹತ್ವ ನೀಡಬೇಕಿಲ್ಲ: ಸಚಿವ ಈಶ್ವರಪ್ಪ

ಯಾವುದೇ ವಿಷಯ ಇದ್ದರೂ ಅದನ್ನು ಸಂಪುಟ ಸಭೆಯಲ್ಲಿ ಚರ್ಚಿಸಲು ಅವಕಾಶವಿದೆ. ಹೀಗಿದ್ದರೂ ಕೂಡ ಸಂಪುಟ ಸಭೆಯಲ್ಲಿ ಯಾವುದೇ ವಿಷಯವನ್ನು ಈಶ್ವರಪ್ಪನವರು ಪ್ರಸ್ತಾಪ ಮಾಡದೆ, ಈ ರೀತಿ ನೇರವಾಗಿ ಏಕಾಏಕಿ ರಾಜ್ಯಪಾಲರಿಗೆ ದೂರು ಸಲ್ಲಿಸುವುದು ಹಿರಿಯರಾದ ಅವರಿಗೆ ಶೋಭೆ ತರುವಂತಹದ್ದಲ್ಲ. ಯಾವುದೇ ತಪ್ಪನ್ನು ಮಾಡದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಪ್ಪು ಮಾಡಿದ್ದಾರೆ ಎಂದು ಆರೋಪಿಸಿ ರಾಜ್ಯಪಾಲರಿಗೆ ದೂರು ನೀಡಿರುವುದು ಎಷ್ಟು ಸರಿ ಎಂದು ಬಿ.ಸಿ.ಪಾಟೀಲ್ ಪ್ರಕಟಣೆ ಮೂಲಕ ಪ್ರಶ್ನಿಸಿದ್ದಾರೆ.

ABOUT THE AUTHOR

...view details