ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ (BDA) ಖಾಲಿ ಇರುವ ಟೈಪಿಸ್ಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಪಂಗಡದ ಬ್ಯಾಕ್ಲಾಗ್ ಹುದ್ದೆಗಳು ಇವಾಗಿವೆ. ಒಟ್ಟು ಎರಡು ಹುದ್ದೆಗಳು ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪಿಯುಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಈ ಹುದ್ದೆ ನೇಮಕಾತಿ ಅರ್ಜಿ ಸಲ್ಲಿಕೆ, ವೇತನ ಸೇರಿದಂತೆ ಇನ್ನಿತರ ಮಾಹಿತಿ ಇಲ್ಲಿದೆ.
ಹುದ್ದೆ ವಿವರ:ಬಿಡಿಎಯಲ್ಲಿ ಅರ್ಜಿ ಆಹ್ವಾನಿಸಿರುವ ಹುದ್ದೆಗಳ ಮಾಹಿತಿ ಇಂತಿದೆ. ಬೆರಳಚ್ಚುಗಾರ 1, ಶೀಘ್ರ ಲಿಪಿಗಾರ 1 ಒಟ್ಟು 2 ಹುದ್ದೆ ಭರ್ತಿ ಮಾಡಲಾಗುವುದು.
ವಿದ್ಯಾರ್ಹತೆ: ಅಭ್ಯರ್ಥಿಗಳು ಪಿಯುಸಿ ಉತ್ತೀರ್ಣರಾಗಿರಬೇಕು. ಬೆರಳಚ್ಚುಗಾರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸಲಾಗುವ ಕನ್ನಡ ಮತ್ತು ಇಂಗ್ಲೀಷ್ ಸೀನಿಯರ್ ಗ್ರೇಡ್ ಟೈಪ್ ರೈಟಿಂಗ್ ಪರೀಕ್ಷೆಯಲ್ಲೂ ಉತ್ತೀರ್ಣರಾಗಿರಬೇಕು. ಶೀಘ್ರ ಲಿಪಿಗಾರ ಹುದ್ದೆಗೆ ಟೈಪ್ರೈಟಿಂಗ್ ಅರ್ಹತೆ ಜೊತೆಗೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸಲಾಗುವುದು ಕನ್ನಡ ಮತ್ತು ಇಂಗ್ಲಿಷ್ ಸೀನಿಯರ್ ಗ್ರೇಡ್ ಶೀಘ್ರಲಿಪಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.