ಕರ್ನಾಟಕ

karnataka

ETV Bharat / state

ಬಿಡಿಎ ಬಡಾವಣೆ ಬಗ್ಗೆ ಹಂತ ಹಂತವಾಗಿ ಮಾಹಿತಿ ವೆಬ್​ಸೈಟ್​ನಲ್ಲಿ ಪ್ರಕಟಿಸಬೇಕು: ಹೈಕೋರ್ಟ್​ - ಈಟಿವಿ ಭಾರತ ಕನ್ನಡ

ಬಿಡಿಎ ಬಡಾವಣೆಗಳ ಮಾಹಿತಿ ವೆಬ್​ಸೈಟ್​ನಲ್ಲಿ ಪ್ರಕಟಿಸುವ ಕುರಿತು ಅರ್ಜಿ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್​ ನೋಟಿಸ್​ ಜಾರಿ ಮಾಡಿದೆ.

BDA
ಹೈಕೋರ್ಟ್​

By

Published : Oct 12, 2022, 9:55 PM IST

ಬೆಂಗಳೂರು: ಬಿಡಿಎ ಕಾರ್ಯನಿರ್ವಹಣೆ ಪಾರದರ್ಶಕತೆ ಕಾಯ್ದುಕೊಳ್ಳುವುದು ಮತ್ತು ತಾನು ರಚಿಸುವ ಎಲ್ಲ ಬಡಾವಣೆಗಳ ಸಂಪೂರ್ಣ ಮಾಹಿತಿ ವೆಬ್‌ಸೈಟ್‌ನಲ್ಲಿ ಹಂತ ಹಂತವಾಗಿ ಪ್ರಕಟಿಸುವುದಕ್ಕೆ ಸಂಬಂಧಿಸಿಂತೆ ಹೈಕೋರ್ಟ್​ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ದಾಖಲಿಸಿರುವ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಅವರ ನೇತೃತ್ವದ ವಿಭಾಗೀಯ ಪೀಠ ಪ್ರತಿವಾದಿಗಳಾದ ಬಿಡಿಎ ಆಯುಕ್ತರಿಗೆ ಮತ್ತು ರಾಜ್ಯ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿದೆ.

ಅರ್ಜಿ ಕುರಿತು ರಾಜ್ಯ ಸರ್ಕಾರದಿಂದ ಮಾಹಿತಿ ಪಡೆಯಲು ಮತ್ತು ಉತ್ತರ ಸಲ್ಲಿಸಲು ಮೂರು ವಾರ ಕಾಲಾವಕಾಶ ನೀಡಬೇಕು ಎಂದು ಸರ್ಕಾರಿ ವಕೀಲೆ ಪ್ರತಿಮಾ ಹೊನ್ನಾಪುರ ನ್ಯಾಯಪೀಠವನ್ನು ಇದೇ ವೇಳೆ ಕೋರಿದರು. ಆ ಮನವಿ ಪರಿಗಣಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿತು.

ಅರ್ಕಾವತಿ ಬಡಾವಣೆಯಲ್ಲಿ ನಿವೇಶನ ಹಂಚಿಕೆಯಾಗಿರುವ ಮೂವರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ್ದ ಏಕಸದಸ್ಯ ಪೀಠ, ಬಡಾವಣೆ ವಿವರ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡುವಂತೆ ನಿರ್ದೇಶಿಸಿತ್ತು. ಇದನ್ನು ಪ್ರಶ್ನಿಸಿ ಬಿಡಿಎ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ವಿಭಾಗೀಯ ಪೀಠ, ಮಾಹಿತಿ ಹಕ್ಕು ಕಾಯ್ದೆಯ ವ್ಯಾಪ್ತಿಗೆ ಬಿಡಿಎ ಬರುತ್ತದೆ. ಆದ್ದರಿಂದ, ಬಿಡಿಎ ತನ್ನ ಕಾರ್ಯ ಚಟುವಟಿಕೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವ ಅಗತ್ಯವಿದೆ.

ಅದರಂತೆ ಪ್ರಾಧಿಕಾರ ರಚಿಸಿರುವ ಬಡಾವಣೆಗಳ ಎಲ್ಲ ವಿವರಗಳನ್ನು ಹಂತ ಹಂತವಾಗಿ ವೆಬ್‌ಸೈಟ್‌ನಲ್ಲಿ ಅಪ್ಲೋಡ್ ಮಾಡಬೇಕು. ಪ್ರಕರಣದಲ್ಲಿ ಸಾರ್ವಜನಿಕ ಪ್ರಾಮುಖ್ಯತೆ ಅಡಿಗಿರುವುದರಿಂದ ಪ್ರಕರಣವನ್ನು ಸ್ವಯಂ ಪ್ರೇರಿತವಾಗಿ ದಾಖಲಿಸಬೇಕು ಎಂದು ರಿಜಿಸ್ಟ್ರಾರ್ ಜನರಲ್‌ಗೆ ನಿರ್ದೇಶಿಸಿ 2022ರ ಸಪ್ಟೆಂಬರ್ 5ರಂದು ಮೇಲ್ಮನವಿ ಇತ್ಯರ್ಥಪಡಿಸಿತ್ತು. ಅದರಂತೆ ಇದೀಗ ಸ್ವಯಂಪ್ರೇರಿತ ಪಿಐಎಲ್ ಸಲ್ಲಿಸಲಾಗಿದೆ.

ಇದನ್ನೂ ಓದಿ :ವಾಣಿಜ್ಯ ನಗರಿಯಲ್ಲಿ ಖೋಟಾ ನೋಟು ಜಾಲ ಪತ್ತೆ: ಮೂವರ ಬಂಧನ..

ABOUT THE AUTHOR

...view details