ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆ ಹೆಚ್ಚು ಬಾಧಿಸುತ್ತಿದೆ. ಅದರಲ್ಲೂ ಮಹಾನಗರಗಳಲ್ಲೇ ಹೆಚ್ಚು ಹರಡುತ್ತಿದೆ. ದಿನೇ ದಿನೇ ಸೋಂಕಿತರ ಸಂಖ್ಯೆ ಏರಿಕೆ ಆಗ್ತಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಬೇಡಿಕೆ ಹೆಚ್ಚಾಗಬಹುದು. ಈ ನಿಟ್ಟಿನಲ್ಲಿ ಬಿಬಿಎಂಪಿ ತಯಾರಿ ನಡೆಸಿದ್ದು, ಸರಣಿ ಸಭೆ ನಡೆಸುತ್ತಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಪಾಲಿಕೆ ಆಯುಕ್ತ ಗೌರವ್ ಗುಪ್ತಾ, ದೆಹಲಿ, ಮಹಾರಾಷ್ಟ್ರಗಳಿಗೆ ಜನರು ಹೋಗಿ ಬರುವುದು ಮಾಡ್ತಿದ್ದು, ಸೋಂಕು ಹರಡುವ ಸಾಧ್ಯತೆ ಹೆಚ್ಚಿದೆ ಎಂದರು.
ಎರಡನೇ ಅಲೆಗೆ ಹೋಲಿಕೆ ಮಾಡಿದ್ರೆ ಮೂರನೇ ಅಲೆಯಲ್ಲಿ ಕಾಣಿಸಿಕೊಂಡಿರುವ ಒಮಿಕ್ರಾನ್ ಸೋಂಕಿನ ಶಕ್ತಿ ಕಡಿಮೆ ಇದೆ ಎಂದು ತಜ್ಞರು ಹೇಳುತ್ತಾರೆ. ಆದರೂ ಸೋಂಕಿನ ಕುರಿತು ನಿರ್ಲಕ್ಷ್ಯ ಮಾಡಲು ಆಗುವುದಿಲ್ಲ. ಸೋಂಕಿತರ ಸಂಖ್ಯೆ ದುಪ್ಪಟ್ಟು ಆಗ್ತಿದ್ದು, ಹಾಸಿಗೆ ಸಮಸ್ಯೆ ಬರದಂತೆ ನೋಡಿಕೊಳ್ಳುವ ಕೆಲಸ ಆಗಬೇಕಿದೆ. ಹೀಗಾಗಿ ಮೊಬೈಲ್ ಟ್ರಯಜಿಂಗ್, ಟೆಲಿ ಟ್ರಯಜಿಂಗ್ ಮೂಲಕವೇ ಅವಶ್ಯಕತೆ ಇರುವ ಸೋಂಕಿತರಿಗೆ ಹಾಸಿಗೆ ವ್ಯವಸ್ಥೆ ಮಾಡಲಾಗುತ್ತೆ ಎಂದು ತಿಳಿಸಿದರು.