ಬೆಂಗಳೂರು: ಕೇಂದ್ರ ಸರ್ಕಾರವು ರಾಜ್ಯದಲ್ಲಿ ಸುಮಾರು 320 ಕಿ.ಮೀ ಉದ್ದದ ಹುನಗುಂದ ಮಾರ್ಗವಾಗಿ ಹಾದುಹೋಗುವ 'ಬೆಳಗಾವಿ-ರಾಯಚೂರು' ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಅನುಮೋದನೆ ನೀಡಿದೆ. ಉತ್ತರ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕ ಸಂಪರ್ಕಿಸುವ 320 ಕಿಲೋ ಮೀಟರ್ ಹೆದ್ದಾರಿ ನಿರ್ಮಾಣಕ್ಕಾಗಿ ಈ ಹಿಂದೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದೀಗ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿಗೆ ಅನುಮೋದನೆ ದೊರಕಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಮಾಹಿತಿ ನೀಡಿದರು.
ಹೆದ್ದಾರಿ ನಿರ್ಮಾಣ ಯೋಜನೆಗೆ ಈಗಾಗಲೇ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ. ಈ ಭಾಗದ ಜನರ ಬಹುಕಾಲದ ಬೇಡಿಕೆಯೊಂದು ಶೀಘ್ರವೇ ಈಡೇರುವ ಕಾಲ ಸನ್ನಿಹಿತವಾಗಿದೆ. ಶೀಘ್ರವೇ ಕಾಮಗಾರಿ ಆರಂಭವಾಗಲಿದೆ. ಮೂಲಸೌಕರ್ಯ ಅಭಿವೃದ್ಧಿ ಮತ್ತು ಜನರ ಅನುಕೂಲಕ್ಕೆ ಅನುಗುಣವಾಗಿ ಕಾಮಗಾರಿಗೆ ಒಪ್ಪಿಗೆ ನೀಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಧನ್ಯವಾದಗಳು ಎಂದು ಜೋಶಿ ತಿಳಿಸಿದ್ದಾರೆ.
ಇದನ್ನೂ ಓದಿ:ರಾಜ್ಯ ಹೆದ್ದಾರಿ ಅಭಿವೃದ್ದಿಗೆ 3500 ಕೋಟಿ ರೂಪಾಯಿ ಬಿಡುಗಡೆ: ಸಚಿವ ಸಿ.ಸಿ.ಪಾಟೀಲ್