ಬೆಂಗಳೂರು:ರಾಜ್ಯದೆಲ್ಲೆಡೆ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಬಳ್ಳಾರಿ ಕಾರು ಅಪಘಾತ ಪ್ರಕರಣ ಕುರಿತಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.
ಸಾಮಾನ್ಯವಾಗಿ ವಿಐಪಿಗಳ ಹೆಸರು ಘಟನೆಯಲ್ಲಿ ಕೇಳಿ ಬಂದರೆ ವಿಷಯ ಸೂಕ್ಷ್ಮವಾಗಿರುತ್ತದೆ. ಊಹಾಪೋಹಗಳಿಗೆ ಪ್ರಾಮುಖ್ಯತೆ ಕೊಟ್ಟು ಒಂದು ನಿರ್ಧಾರಕ್ಕೆ ಬರಲು ಸಾಧ್ಯವಿಲ್ಲ. ಆದರೆ, ನಮ್ಮ ಪೊಲೀಸರು ಸತ್ಯ ಶೋಧನೆಯಲ್ಲಿ ತೊಡಗಿದ್ದಾರೆ. ಈ ವಿಚಾರದಲ್ಲಿ ಸರ್ಕಾರ ಯಾರನ್ನೂ ರಕ್ಷಣೆ ಮಾಡ್ತಿಲ್ಲ. ಘಟನೆ ನಡೆದಿರೋದು ಹಗಲಿನಲ್ಲಿ, ರಾತ್ರಿ ಅಲ್ಲ. ಘಟನೆಗೆ ಪ್ರತ್ಯಕ್ಷ ಸಾಕ್ಷಿಗಳಿವೆ. ಅದರ ಅಧಾರದ ಮೇಲೆ ಎಫ್ಐಆರ್ ದಾಖಲಾಗಿದೆ ಎಂದರು.
ಬಳ್ಳಾರಿ ಕಾರು ಅಪಘಾತ ಪ್ರಕರಣ: ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ಇನ್ನೂ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಪ್ರಕರಣದ ತನಿಖೆ ಪ್ರಗತಿಯಲ್ಲಿದೆ. ಎಫ್ಐಆರ್ನಲ್ಲಿ ಸಚಿವ ಆರ್.ಅಶೋಕ ಅವರ ಪುತ್ರನ ಹೆಸರಿರಲಿಲ್ಲ ಎಂಬುದನ್ನು ಗಮನದಲ್ಲಿಟ್ಟುಕೊಂಡು ಅವರ ಪಾತ್ರ ಇಲ್ಲ ಅಂತಾ ಹೇಳಿದ್ದೆ. ಇದೀಗ ತನಿಖೆಯಿಂದ ಮುಂದಿನ ಸತ್ಯಾಸತ್ಯತೆ ತಿಳಿದು ಬರಲಿದೆ ಎಂದಿದ್ದಾರೆ.
ಹುಬ್ಬಳ್ಳಿಯಲ್ಲಿ ಪಾಕ್ ಪರ ವಿದ್ಯಾರ್ಥಿಗಳು ಘೋಷಣೆ ಕೂಗಿದ ಪ್ರಕರಣಕ್ಕೆ ಪ್ರತಿಕ್ರಿಯಿಸಿದ ಸಚಿವರು, ಈ ಘಟನೆ ಇಂದು ಬೆಳಗ್ಗೆ ನಡೆದಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿ ತರಿಸಿಕೊಳ್ಳುತ್ತೇನೆ. ಕೆಲ ಕಾಶ್ಮೀರಿ ವಿದ್ಯಾರ್ಥಿಗಳು ಘೋಷಣೆ ಕೂಗಿದ್ದರು ಎಂಬುದು ಗೊತ್ತಾಗಿದ್ದು, ಅವರನ್ನ ವಶಕ್ಕೆ ಪಡೆಯಲಾಗಿದೆ. ಯಾರೇ ಆಗಲಿ ರಾಷ್ಟ್ರವಿರೋಧಿ ಘೋಷಣೆಗಳನ್ನ ಕೂಗೋದಕ್ಕೆ ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿದರು.