ಬೆಂಗಳೂರು: ಅಂತಾರಾಷ್ಟ್ರೀಯ ಮಕ್ಕಳ ಕ್ಯಾನ್ಸರ್ ದಿನದ ಪ್ರಯುಕ್ತ ನಗರದ ಕಿದ್ವಾಯಿ ಆಸ್ಪತ್ರೆಯಲ್ಲಿ ಮೊದಲ ಬೋನ್ ಮ್ಯಾರೋ ಟ್ರಾನ್ಸ್ ಪ್ಲಾಂಟ್ ಘಟಕ ಆರಂಭಿಸಲಾಗಿದೆ. ಬೋನ್ ಮ್ಯಾರೋ ಟ್ರಾನ್ಸ್ ಪ್ಲಾಂಟ್ ಘಟಕಕ್ಕೆ ಇಂದು ಸಚಿವ ಸುಧಾಕರ್ ಚಾಲನೆ ನೀಡಿದರು. ಈ ವೇಳೆ, ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಕಿದ್ವಾಯಿ ನಿರ್ದೇಶಕ ಡಾ. ಸಿ. ರಾಮಚಂದ್ರ ಉಪಸ್ಥಿತರಿದ್ದರು. ಲೋಕಾಪರ್ಣೆ ನಿಮಿತ್ತ ಮೊದಲ ಇಬ್ಬರು ಮಕ್ಕಳಿಗೆ ಬೋನ್ ಮ್ಯಾರೋ ಟ್ರಾನ್ಸ್ ಆಪರೇಷನ್ ನಡೆಸಲಾಯಿತು.
ಈ ಕುರಿತು ಮಾತಾನಾಡಿದ ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ಬೋನ್ ಮ್ಯಾರೋ ಟ್ರಾನ್ಸ್ ಪ್ಲಾಂಟ್ ಇಂದು ಶುರು ಮಾಡಿದ್ದೇವೆ. ಆದಷ್ಟು ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡುವ ಸಲುವಾಗಿ ಈ ಘಟಕ ಆರಂಭಿಸಿದ್ದೇವೆ. ಇಂದು ಇಬ್ಬರು ಮಕ್ಕಳಿಗೆ ಬೋನ್ ಮ್ಯಾರೋ ಟ್ರಾನ್ಸ್ ಪ್ಲಾಂಟ್ ಚಿಕಿತ್ಸೆ ಆರಂಭ ಆಗಿದ್ದು, ಎಲ್ಲರಿಗೂ ಉತ್ತಮ ಆರೋಗ್ಯ ನೀಡುವುದು ನಮ್ಮ ಸರ್ಕಾರದ ಗುರಿ ಅಂತ ತಿಳಿಸಿದರು.