ಬೆಂಗಳೂರು :ಕಾರು ಪಲ್ಟಿಯಾಗಿ ಸಂಭವಿಸಿದ ರಸ್ತೆ ಅವಘಡದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ಇಂದು ಬೆಳಗಿನ ಜಾವ 2:30ರ ಸುಮಾರಿಗೆ ನಗರದ ಹುಣಸಮಾರನಹಳ್ಳಿ ಸಮೀಪ ನಡೆದಿದೆ. ಕಾರ್ತಿಕ್ ಜೈನ್ ಹಾಗೂ ಆದರ್ಶ್ ಕುಮಾರ್ ಮೃತಪಟ್ಟ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ.
ಹ್ಯೂಂಡೈಯ್ ಐ 10 ಕಾರಿನಲ್ಲಿ ನಂದಿ ಬೆಟ್ಟಕ್ಕೆ ಟ್ರಿಪ್ ಹೊರಟಿದ್ದ ಖಾಸಗಿ ಕಾಲೇಜಿನ ಒಟ್ಟು ಐವರು ವಿದ್ಯಾರ್ಥಿಗಳು, ಬೆಳಗಿನ ಜಾವ ಹೋಗುವುದು ಬೇಡ ಎಂದು ವಾಪಸ್ ಬರುತ್ತಿದ್ದರು. ನಿದ್ದೆ ಮಂಪರಿನಲ್ಲಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿಯಾಗಿದೆ. ಪರಿಣಾಮ ಕಾರ್ತಿಕ್ ಜೈನ್ ಸ್ಥಳದಲ್ಲೇ ಮೃತಪಟ್ಟರೆ, ಆದರ್ಶ್ ಕುಮಾರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಾರಿನಲ್ಲಿದ್ದ ಉಳಿದ ಮೂವರು ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯಲಹಂಕ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿತ್ರದುರ್ಗ ರಸ್ತೆ ಅಪಘಾತ : ಭಾನುವಾರ ಚಿತ್ರದುರ್ಗ ಜಿಲ್ಲೆಯ ಮಲ್ಲಾಪುರ ಗ್ರಾಮದ ಬಳಿ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದುಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿ ಒಟ್ಟು ಐವರು ಸಾವನ್ಬಪ್ಪಿ, ಮೂವರು ಗಾಯಗೊಂಡಿದ್ದರು. ಅಪಘಾತ ನಡೆದ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಪರಶುರಾಮ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದರು. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ :ತುಮಕೂರು : ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವು.. ಓರ್ವನ ಸ್ಥಿತಿ ಗಂಭೀರ