ಕರ್ನಾಟಕ

karnataka

ETV Bharat / state

ದ.ಏಷ್ಯಾದಲ್ಲೇ ಮೊದಲ ಬಾರಿ 'ರೋಸೆನ್‌ಬೌರ್ ಫೈರ್‌ಫೈಟಿಂಗ್ ಸಿಮ್ಯುಲೇಟರ್' ಪರಿಚಯಿಸಿದ ಕೆಐಎಎಲ್​​

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಕ್ಷಿಣ ಏಷ್ಯಾದಲ್ಲೇ ಮೊದಲ ಬಾರಿಗೆ ಅತ್ಯಾಧುನಿಕ 'ರೋಸೆನ್‌ಬೌರ್ ಫೈರ್‌ಫೈಟಿಂಗ್ ಸಿಮ್ಯುಲೇಟರ್' (Rosenbauer firefighting simulator) ಅಗ್ನಿಶಾಮಕವನ್ನು ಪರಿಚಯಿಸಲಾಗಿದೆ.

airport
ರೋಸೆನ್‌ಬೌರ್ ಫೈರ್‌ಫೈಟಿಂಗ್ ಸಿಮ್ಯುಲೇಟರ್

By

Published : Nov 22, 2021, 9:45 PM IST

ದೇವನಹಳ್ಳಿ: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport) ಅಗ್ನಿ ಅವಘಡವನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸಲು ಇದೇ ಮೊದಲ ಬಾರಿಗೆ 'ರೋಸೆನ್‌ಬೌರ್ ಫೈರ್‌ಫೈಟಿಂಗ್ ಸಿಮ್ಯುಲೇಟರ್' (Rosenbauer firefighting simulator)ಅನ್ನು ಪರಿಚಯಿಸಿದೆ. ಇದು ದಕ್ಷಿಣ ಏಷ್ಯಾದಲ್ಲೇ ಮೊದಲ ಬಾರಿಗೆ ಪರಿಚಯಿಸಿದ ಅತ್ಯಾಧುನಿಕ ಅಗ್ನಿಶಾಮಕ ತಂತ್ರಜ್ಞಾನವಾಗಿದೆ.

ರೋಸೆನ್‌ಬೌರ್ ಫೈರ್‌ಫೈಟಿಂಗ್ ಸಿಮ್ಯುಲೇಟರ್

ನೂತನ ತಂತ್ರಜ್ಞಾನದ ಬಗ್ಗೆ ಮಾತನಾಡಿದ ಬಿಐಎಎಲ್ ಸಿಇಒ ಜಯರಾಜ್ ಷಣ್ಮುಗಂ, ಬೆಂಗಳೂರು ವಿಮಾನ ನಿಲ್ದಾಣದ ಸುರಕ್ಷತೆಯ ದೃಷ್ಟಿಯಿಂದ ದಕ್ಷಿಣ ಏಷ್ಯಾದಲ್ಲೇ ಮೊದಲ ಬಾರಿಗೆ ರೋಸೆನ್‌ಬೌರ್ ಫೈರ್‌ಫೈಟಿಂಗ್ ಸಿಮ್ಯುಲೇಟರ್‌ ಪರಿಚಯಿಸಲಾಗುತ್ತಿದೆ. ಇದು ಯಾವುದೇ ರೀತಿಯ ಅಗ್ನಿ ಅವಘಡವಾದರೂ ಕೂಡಲೇ ಆರಿಸುವ ಕೆಲಸದಲ್ಲಿ ನಿಪುಣತೆ ಹೊಂದಿದೆ. ಈ ಅತ್ಯಾಧುನಿಕ ತಂತ್ರಜ್ಞಾನದ ಅಗ್ನಿಶಾಮಕ ಕುರಿತು ಭಾರತದ ಯಾವುದೇ ವಿಮಾನ ನಿಲ್ದಾಣದ ತಂಡ ಇಲ್ಲಿಗೆ ಆಗಮಿಸಿ ಇದರ ತರಬೇತಿ ಪಡೆಯಲು ಸಹ ಮುಕ್ತ ಅವಕಾಶವನ್ನು ಒದಗಿಸಿಕೊಡಲಾಗಿದೆ.

ರೋಸೆನ್‌ಬೌರ್ ಫೈರ್‌ಫೈಟಿಂಗ್ ಸಿಮ್ಯುಲೇಟರ್

ವಿಮಾನ ನಿಲ್ದಾಣ ಅಥವಾ ವಿಮಾನಗಳ ಅಪಘಾತದ ಸಂದರ್ಭದಲ್ಲಿ ಆಗುವ ಅಗ್ನಿ ಅವಘಡವನ್ನು ತುರ್ತಾಗಿ ತಡೆಯಲು ಈ ಅತ್ಯಾಧುನಿಕ ಸಿಮ್ಯುಲೇಟರ್ ಕೆಲಸ ಮಾಡಲಿದೆ. ರೋಸನ್‌ಬೌರ್ ಸಿಮ್ಯುಲೇಟರ್‌ನ ಎರಡು ಫ್ಯಾಂಥರ್ 6 ಟ್ರಕ್‌ಗಳು, ಹಾಗೂ 8 ಟ್ರಕ್‌ಗಳನ್ನು ಇರಿಸಲಾಗಿದೆ. ಈ ಟ್ರಕ್‌ಗಳಲ್ಲಿ ಎರಡು ಹೈರೀಚ್ ಎಕ್ಸ್ಟೆಂಡೆಬಲ್ ಟರೆಟ್ಸ್ (ಎಚ್‌ಆರ್‌ಇಟಿ)ಯನ್ನು ಒಳಗೊಂಡಿದ್ದು, ಈ ಮಟ್ಟದ ಸುಸಜ್ಜಿತ ಟ್ರಕ್‌ಗಳನ್ನು ದಕ್ಷಿಣ ಏಷ್ಯಾದಲ್ಲಿಯೇ ಯಾವ ವಿಮಾನ ನಿಲ್ದಾಣಗಳು ಒಳಗೊಂಡಿಲ್ಲ ಎಂದರು.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸುರಕ್ಷತೆ ಕಾಯ್ದುಕೊಳ್ಳುವುದು ನಮ್ಮ ಮೊದಲ ಆದ್ಯತೆ. ರೋಸೆನ್‌ಬೌರ್ ಸಿಎಫ್‌ಟಿ ಮೂಲಕ ಕಠಿಣವಾದ ಅಗ್ನಿ ಅವಘಡದ ಸಂದರ್ಭದಲ್ಲಿ ಈ ಸಿಮ್ಯುಲೇಟರ್ ಚಾತುರ್ಯದಿಂದ ಅಗ್ನಿ ಶಮನ ಮಾಡಲಿದೆ.

ವಿಮಾನ ನಿಲ್ದಾಣದಲ್ಲಿರುವ ಅಗ್ನಿಶಾಮಕದಳದವರಿಗೆ ಈ ಸಿಮ್ಯುಲೇಟರ್‌ ಬಳಸುವ ವಿಧಾನವನ್ನು ತರಬೇತಿ ನೀಡಲಾಗಿದೆ. ಅದರಲ್ಲೂ ಕಮಾಂಡ್ ನಿಯಂತ್ರಕರು, ಮೂಲ ಚಾಲಕರು, ಪೊಸೀಶನಿಂಗ್ ಇನ್ಸಿಡೆಂಟ್ ಕಮಾಂಡರ್‌ಗಳು, ಕ್ಯೂ ಕಮಾಂಡರ್‌ಗಳು ಹಾಗೂ ಅಗ್ನಿಶಾಮಕ ಮುಂಚೂಣಿ ಸಿಬ್ಬಂದಿಗೆ ಈ ತರಬೇತಿಯನ್ನು ಕಡ್ಡಾಯವಾಗಿ ನೀಡಲಾಗುವುದು ಎಂದು ವಿವರಿಸಿದ್ದಾರೆ.

ABOUT THE AUTHOR

...view details