ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಮುಂಜಾನೆ ವಾಕಿಂಗ್ ಮುಗಿಸಿ ಬರುತ್ತಿದ್ದ ಸಂದರ್ಭದಲ್ಲಿ ಮೂರ್ಛೆ ರೋಗದಿಂದ ವ್ಯಕ್ತಿಯೋರ್ವ ಮಲ್ಲೇಶ್ವರಂ ಬಳಿ ರಸ್ತೆಯಲ್ಲಿ ಕುಸಿದು ಬಿದ್ದಿದ್ದಾನೆ. ಈ ವೇಳೆ ಸ್ಥಳೀಯರು ಕೊರೊನಾ ಸೋಂಕು ಇರಬಹುದೆಂದು ಹತ್ತಿರ ಹೋಗದೆ ಮೊದಲು ಆ್ಯಂಬುಲೆನ್ಸ್ಗೆ ಕರೆ ಮಾಡಿದ್ದಾರೆ.
ಮೂರ್ಛೆ ರೋಗದಿಂದ ಕುಸಿದು ಬಿದ್ದ ವ್ಯಕ್ತಿ: ಪೊಲೀಸರು ಬರೋವರೆಗೆ ಮುಟ್ಟಲ್ಲ ಎಂದ ಆ್ಯಂಬುಲೆನ್ಸ್ ಸಿಬ್ಬಂದಿ! - ಕೊರೊನಾ
ಮೂರ್ಛೆ ರೋಗದಿಂದ ಕುಸಿದು ಬಿದ್ದ ವ್ಯಕ್ತಿಯನ್ನು ಪೊಲೀಸರು ಬಾರದೆ ಮುಟ್ಟುವುದಿಲ್ಲ ಎಂದು ಆ್ಯಂಬುಲೆನ್ಸ್ ಸಿಬ್ಬಂದಿ ಪಟ್ಟು ಹಿಡಿದ ಘಟನೆ ನಗರದಲ್ಲಿ ನಡೆದಿದೆ.
ಮೂರ್ಛೆ ರೋಗದಿಂದ ಕುಸಿದುಬಿದ್ದ ವ್ಯಕ್ತಿ
ತಡವಾಗಿ ಸ್ಥಳಕ್ಕೆ ಆಗಮಿಸಿದ ಆ್ಯಂಬುಲೆನ್ಸ್ ಸಿಬ್ಬಂದಿ, ಪೊಲೀಸರು ಬರುವವರೆಗೆ ರೋಗಿಯನ್ನ ಕರೆದೊಯ್ಯಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ಬಳಿಕ ಸ್ಥಳಕ್ಕೆ ಆಗಮಿಸಿದ ಮಲ್ಲೇಶ್ವರಂ ಪೊಲೀಸರು ಮೂರು ಗಂಟೆಗಳ ಬಳಿಕ ಸ್ಥಳೀಯ ಕೆ.ಸಿ ಜನರಲ್ ಆಸ್ಪತ್ರೆಗೆ ರೋಗಿಯನ್ನು ಕರೆದೊಯ್ದಿದ್ದಾರೆ. ಸದ್ಯ ಮಲ್ಲೇಶ್ವರಂ ಠಾಣೆಯಲ್ಲಿ ಪ್ರಕರಣ ದಾಖಲಿಸಿ ವ್ಯಕ್ತಿಯ ಹಿನ್ನೆಲೆ ಕಲೆಹಾಕಿದ್ದಾರೆ.