ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ನಡೆದ ಬೆಂಗಳೂರು ಬಂದ್ಗೆ ಭಾರಿ ಬೆಂಬಲ ವ್ಯಕ್ತವಾಗಿದೆ. ಆದರೆ, ಬೆಂಗಳೂರು ಬಂದ್ನಿಂದ ಸರ್ಕಾರದ ಬೊಕ್ಕಸಕ್ಕೆ ನೂರಾರು ಕೋಟಿ ರೂ. ನಷ್ಟ ಸಂಭವಿಸಿದೆ. ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ರೈತ ಸಂಘಟನೆಗಳು ಸೇರಿದಂತೆ ವಿವಿಧ ಸಂಘ, ಸಂಸ್ಥೆಗಳು ಬೆಂಗಳೂರು ಬಂದ್ಗೆ ಕರೆ ನೀಡಿದ್ದವು. ಬಹುತೇಕ ಕಡೆ ಅಂಗಡಿ ಮುಂಗಟ್ಟು, ವ್ಯಾಪಾರ ವಹಿವಾಟು, ಹೋಟೆಲ್ಗಳನ್ನು ಮುಚ್ಚಿ ಪ್ರತಿಭಟನೆಯಲ್ಲಿ ಭಾಗಿಯಾದರು.
ಬಂದ್ ಹಿನ್ನೆಲೆ ನಗರದಲ್ಲಿ ವಾಹನ ಸಂಚಾರ, ಜನರ ಓಡಾಟದ ಪ್ರಮಾಣವೂ ಕಡಿಮೆ ಇತ್ತು. ಹೀಗಾಗಿ ಬೆಂಗಳೂರು ಬಹುತೇಕ ಸ್ತಬ್ಧವಾಗಿತ್ತು. ಅಂಗಡಿ ಮುಂಗಟ್ಟು, ಹೋಟೆಲ್, ಸಿನಿಮಾ ಮಂದಿರಗಳು, ಮಾಲ್ಗಳು, ಬಾರ್ಗಳು, ಸೂಪರ್ ಮಾರ್ಕೆಟ್ಗಳು ಬಹುತೇಕ ಬಂದ್ ಆಗಿದ್ದವು. ಹೀಗಾಗಿ ಬೆಂಗಳೂರಲ್ಲಿ ಬಂದ್ನಿಂದ ಬಹುತೇಕ ವ್ಯಾಪಾರ ವಹಿವಾಟು ಸ್ಥಗಿತಗೊಂಡಿದ್ದವು.
ವಾಣಿಜ್ಯ ಒಕ್ಕೂಟ ಎಫ್‌ಕೆಸಿಸಿಐ ಅಧ್ಯಕ್ಷ ಬಿ ವಿ ಗೋಪಾಲ್ ರೆಡ್ಡಿ ಅವರು ಬೆಂಗಳೂರು ಬಂದ್ನಿಂದ ಉಂಟಾಗಿರುವ ನಷ್ಟದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ರಾಜ್ಯದ ಒಟ್ಟು ಆದಾಯದಲ್ಲಿ ಬೆಂಗಳೂರಿನಲ್ಲಿನ ಆದಾಯದ ಪಾಲು ಶೇ.60ರಷ್ಟಿದೆ. ಬಂದ್ನಿಂದ ವ್ಯಾಪಾರ ವಹಿವಾಟು ಸ್ಥಗಿತವಾಗಿರುವುದರಿಂದ ಆರ್ಥಿಕ ನಷ್ಟ ಉಂಟಾಗಿದೆ ಎಂದು ತಿಳಿಸಿದರು.