ಬೆಂಗಳೂರು:ಇತ್ತೀಚೆಗೆ ಬೆಂಗಳೂರು ಸಿಸಿಬಿ ಪೊಲೀಸರು ಕ್ರಿಕೆಟ್ ಮ್ಯಾಚ್ ಫಿಕ್ಸಿಂಗ್ ದಂಧೆಯ ಜಾಲವನ್ನು ಬಯಲಿಗೆಳೆದಿದ್ದರು. ಈ ಪ್ರಕರಣ ಸ್ಥಳೀಯ ಮಟ್ಟದಿಂದ ಅಂತರಾಷ್ಟ್ರೀಯ ಮಟ್ಟದವರೆಗೂ ತನ್ನ ಕಬಂಧ ಬಾಹುಗಳನ್ನು ವಿಸ್ತರಿಸಿಕೊಂಡಿತ್ತು. ಈ ಕೇಸ್ ಬೆನ್ನು ಹತ್ತಿದ ಸಿಸಿಬಿ ಪೊಲೀಸರಿಗೆ ಇದೀಗ ಬಿಸಿಸಿಐನ ಭ್ರಷ್ಟಾಚಾರ ನಿಗ್ರಹ ಘಟಕವೂ ಸಾಥ್ ಕೊಟ್ಟಿದೆ.
ಪ್ರಕರಣದಲ್ಲಿ ಭಾಗಿಯಾಗಿದ್ದ ಅಂತರಾಷ್ಟ್ರೀಯ ಕ್ರಿಕೆಟ್ ಆಟಗಾರರು:
ಕ್ರಿಕೆಟ್ ಮ್ಯಾಚ್ ಫಿಕ್ಸಿಂಗ್ ದಂಧೆಯಲ್ಲಿ ಕೇವಲ ದೇಶೀಯ ಆಟಗಾರರಷ್ಟೇ ಅಲ್ಲ. ಅಂತರಾಷ್ಟ್ರೀಯ ಮಟ್ಟದ ಆಟಗಾರರೂ ಕೂಡಾ ಅಕ್ರಮದಲ್ಲಿ ಭಾಗಿಯಾಗಿರುವ ವಿಚಾರ ತನಿಖೆಯ ವೇಳೆ ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಈಗಾಗಲೇ ಕೆಲವು ವಿದೇಶಿ ಕ್ರಿಕೆಟ್ ಆಟಗಾರರಿಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.