ಬೆಂಗಳೂರು: ನಮ್ಮ ಮೆಟ್ರೋ ಎರಡನೇ ಹಂತದಲ್ಲಿ ನಿರ್ಮಾಣವಾಗುತ್ತಿರುವ ಎಲೆಕ್ಟ್ರಾನಿಕ್ ಸಿಟಿ ನಿಲ್ದಾಣವನ್ನು ಇನ್ಫೋಸಿಸ್ ಫೌಂಡೇಷನ್ ಕೋನಪ್ಪನ ಅಗ್ರಹಾರ ಮೆಟ್ರೋ ನಿಲ್ದಾಣ ಎಂದು ಬದಲಿಸಲು ರಾಜ್ಯ ಸರ್ಕಾರ ಶುಕ್ರವಾರ ಅನುಮೋದನೆ ನೀಡಿದೆ.
'ನಮ್ಮ ಮೆಟ್ರೋ' ನಿಲ್ದಾಣಕ್ಕೂ ಇನ್ಫೋಸಿಸ್ ನಂಟು..! - metro station
ಎಲೆಕ್ಟ್ರಾನಿಕ್ ಸಿಟಿ ಬಳಿಯ ಕೋನಪ್ಪನ ಅಗ್ರಹಾರ ಮೆಟ್ರೋ ನಿಲ್ದಾಣವನ್ನ ಇನ್ಫೋಸಿಸ್ ಫೌಂಡೇಷನ್ ಕೋನಪ್ಪನ ಅಗ್ರಹಾರ ಮೆಟ್ರೋ ಸ್ಟೇಷನ್ ಎಂದು ಬದಲಾವಣೆ ಮಾಡಲಾಗಿದೆ.

ನಮ್ಮ ಮೆಟ್ರೋ ನಿಲ್ದಾಣಕ್ಕೂ ಇನ್ಫೋಸಿಸ್ ನಂಟು..!
ಇನ್ಫೋಸಿಸ್ ಪ್ರತಿಷ್ಠಾನವು ಈ ನಿಲ್ದಾಣವನ್ನು ಅಭಿವೃದ್ಧಿಪಡಿಸಿ ಮುಂದಿನ 30 ವರ್ಷಗಳ ಕಾಲ ಅದರ ನಿರ್ವಹಣೆಯನ್ನೂ ಮಾಡಲಿದೆ. ಹಾಗಾಗಿ ಈ ಮಾರ್ಗದಲ್ಲಿ ರೈಲು ಸಂಚಾರ ಆರಂಭವಾದ ದಿನದಿಂದ 30 ವರ್ಷಗಳವರೆಗೆ ನಿಲ್ದಾಣವನ್ನು ಇದೇ ಹೆಸರಿನಿಂದ ಕರೆಯಲಾಗುತ್ತದೆ. ₹200 ಕೋಟಿ ವೆಚ್ಚದಲ್ಲಿ ಇನ್ಫೋಸಿಸ್ ಈ ನಿಲ್ದಾಣವನ್ನು ನಿರ್ಮಾಣ ಮಾಡಲಿದೆ.
ಇನ್ನು ಈ ಕುರಿತು ಬೆಂಗಳೂರು ಮೆಟ್ರೋ ನಿಗಮ ನಿಯಮಿತದೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದು, ಹೆಸರು ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಿಲ್ದಾಣದ ನಿರ್ವಹಣೆ, ಉಸ್ತುವಾರಿ ಎಲ್ಲವೂ ಇನ್ಫೋಸಿಸ್ ಫೌಂಡೇಷನ್ ನೋಡಿಕೊಳ್ಳಲಿದೆ.