ಬೆಂಗಳೂರು:ಇಂದು ಭಾರತ್ ಬಂದ್ ಕರೆ ಹಿನ್ನೆಲೆಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ಕಾರ್ಮಿಕ ಸಂಘಟನೆಗಳಿಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಧನ್ಯವಾದ ತಿಳಿಸಿದ್ದಾರೆ.
ಮುಷ್ಕರದಲ್ಲಿ ಶಾಂತಿ ಕಾಪಾಡಿದ ಸಂಘಟನೆಗಳಿಗೆ ಭಾಸ್ಕರ್ ರಾವ್ ಧನ್ಯವಾದ - Bhaskar Rao thanked bharat bandh protesters
ಇಂದು ಭಾರತ್ ಬಂದ್ ಕರೆ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ಕಾರ್ಮಿಕ ಸಂಘಟನೆಗಳಿಗೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಧನ್ಯವಾದ ತಿಳಿಸಿದ್ದಾರೆ.
ಪ್ರತಿಭಟನಾಕಾರರಿಗೆ ಆಯುಕ್ತ ಭಾಸ್ಕರ್ ರಾವ್ ಧನ್ಯವಾದ
ಮುಷ್ಕರದಲ್ಲಿ ಶಾಂತಿ ಕಾಪಾಡಿದ ಸಂಘಟನೆಗಳಿಗೆ ಭಾಸ್ಕರ್ ರಾವ್ ಧನ್ಯವಾದ
ಇಂದು ನಡೆದ ಮುಷ್ಕರ ಶಾಂತಿಯುತವಾಗಿದೆ. ನಗರದ ಎಲ್ಲಿಯೂ ಸಹ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಪ್ರತಿಭಟನಾಕಾರರು ಕಾನೂನಾತ್ಮಕವಾಗಿ ತಮ್ಮ ಬೇಡಿಕೆಗಳ ಈಡೇರಿಸುವಂತೆ ಮುಷ್ಕರ ನಡೆಸಿದ್ದಾರೆ. ಮುಷ್ಕರದಿಂದಾಗಿ ವಾಹನ ಸವಾರರಿಗೆ ತೊಂದರೆ ಉಂಟಾಗಿಲ್ಲ. ಹೀಗಾಗಿ ಪೊಲೀಸರಿಗೆ ಸಹಕರಿಸಿದ ಪ್ರತಿಯೊಬ್ಬರಿಗೂ ಧನ್ಯವಾದ ಎಂದು ಭಾಸ್ಕರ್ ರಾವ್ ತಿಳಿಸಿದ್ದಾರೆ.
ಕಾರ್ಮಿಕರ ಪ್ರಮುಖ 11 ಬೇಡಿಕೆ ಈಡೇರಿಕೆಗಾಗಿ ಕಾರ್ಮಿಕ ಪರ ಸಂಘಟನೆಗಳು ಇಂದು ಮುಷ್ಕರಕ್ಕೆ ಕರೆ ನೀಡಿದ್ದವು. ನಗರದ ಫ್ರೀಡಂ ಪಾರ್ಕ್ ಹೊರತುಪಡಿಸಿದರೆ ಬೇರೆಲ್ಲೂ ಮುಷ್ಕರಕ್ಕೆ ಪೊಲೀಸರು ಅನುಮತಿ ನೀಡಿರಲಿಲ್ಲ.