ಬೆಂಗಳೂರು: ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಾದ ಮಂಡಿಸಲು ರಾಜ್ಯ ಸರ್ಕಾರ ಮೂವರು ವಿಶೇಷ ಅಭಿಯೋಜಕರನ್ನು ನೇಮಕ ಮಾಡಿದೆ.
ಬೆಂಗಳೂರು ಗಲಭೆ: ಡಿಜಿ ಹಳ್ಳಿ ಠಾಣೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ ಅಭಿಯೋಜಕರು - ಡಿಜಿ ಹಳ್ಳಿ ಠಾಣೆ
ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣ ಸಂಬಂಧಿಸಿದಂತೆ ಮಾಹಿತಿ ಕಲೆ ಹಾಕಲು ರಾಜ್ಯ ಸರ್ಕಾರ ನೇಮಿಸಿರುವ ವಿಶೇಷ ಅಭಿಯೋಜಕರು ಇಂದು ಡಿಜೆ ಹಳ್ಳಿ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಾರೆ.
ಪಿ.ಪ್ರಸನ್ನ ಕುಮಾರ್, ತೇಜಸ್.ಪಿ ಹಾಗೂ ಒ.ಬಿ ಚಂದ್ರಶೇಖರ್ ಆರೋಪಿಗಳ ವಿರುದ್ಧ ಹಾಗೂ ಸರ್ಕಾರದ ಪರ ಕೋರ್ಟ್ನಲ್ಲಿ ತಮ್ಮ ವಾದ ಮಂಡನೆ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಮೂವರು ಅಭಿಯೋಜಕರು ಇಂದು ಡಿಜೆ ಹಳ್ಳಿ ಪೊಲೀಸ್ ಠಾಣೆಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು .
ಭೇಟಿ ಬಳಿಕ ಡಿಸಿಪಿ ಕುಲದೀಪ್ ಜೈನ್ ಅವರಿಂದ ಪ್ರಕರಣ ಕುರಿತಂತೆ ಮಾಹಿತಿ ಸಂಗ್ರಹಿಸಿದ್ದಾರೆ. ಪ್ರಕರಣದಲ್ಲಿ ಯಾವ ಆರೋಪಿಗಳು ಶಿಕ್ಷೆಯಿಂದ ತಪ್ಪಿಸಿಕೊಳ್ಳಬಾರದು ಎಂಬ ದೃಷ್ಟಿಯಿಂದ ಕಾನೂನು ಇಲಾಖೆ ಮೂವರು ವಿಶೇಷ ಅಭಿಯೋಜಕರನ್ನು ನೇಮಿಸಿದೆ. ಗಲಭೆ ಪ್ರಕರಣದಲ್ಲಿ 300ಕ್ಕೂ ಹೆಚ್ಚು ಆರೋಪಿಗಳನ್ನುಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.