ಬೆಂಗಳೂರು : ನಗರದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ ಕಂಡಿದ್ದು, 2,481 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. 17 ಮಂದಿ ಮೃತಪಟ್ಟಿದ್ದಾರೆ.
ಉದ್ಯಾನ ನಗರಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆ: ಇಂದು 2,481 ಮಂದಿಗೆ ಪಾಸಿಟಿವ್ - ಬೆಂಗಳೂರು ಕೋವಿಡ್ ಸುದ್ದಿ
ರಾಜಧಾನಿ ಬೆಂಗಳೂರಿನಲ್ಲಿ ಇಂದು 2,363 ಮಂದಿ ಕೊರೊನಾ ಮುಕ್ತರಾಗಿದ್ದು, 2,481 ಹೊಸ ಪ್ರಕರಣಗಳು ದಾಖಲಾಗಿವೆ.
ಬೆಂಗಳೂರು ಕೋವಿಡ್ ಪ್ರಕರಣಗಳು
ಇಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3,10,021 ಕ್ಕೆ ಏರಿಕೆಯಾಗಿದೆ. ಇಂದು 2,363 ಮಂದಿ ಗುಣಮುಖರಾಗಿದ್ದು, ಈವರೆಗೆ ಒಟ್ಟು 2,41,942 ಮಂದಿ ಚೇತರಿಸಿಕೊಂಡಿದ್ದಾರೆ.
ಪ್ರಸ್ತುತ ಒಟ್ಟು 64,536 ಸಕ್ರಿಯ ಪ್ರಕರಣಗಳಿವೆ. ಇಂದು 17 ಮಂದಿ ಮೃತಪಟ್ಟಿದ್ದು, ಇದುವರೆಗೆ 3,542 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಸದ್ಯ, 364 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.