ಬೆಂಗಳೂರು: ಸಾರ್ವಜನಿಕರಿಗೆ ಬೆದರಿಸಿ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಳಿ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪೂರ್ವ ವಿಭಾಗ ಪೊಲೀಸರ ತಂಡ ಯಶಸ್ವಿಯಾಗಿದೆ.
ಒಂಟಿಯಾಗಿ ಓಡಾಡುವವರೇ ಇವರ ಟಾರ್ಗೆಟ್: ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು - Arrest of Bangalore burglary accused
ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಬೆಂಗಳೂರು ಪೂರ್ವ ವಿಭಾಗ ಪೊಲೀಸರ ತಂಡ ಯಶಸ್ವಿಯಾಗಿದೆ. ಬಂಧಿತರಿಂದ 4 ದ್ವಿಚಕ್ರವಾಹನ, 40 ವಿವಿಧ ಕಂಪನಿಯ ಮೊಬೈಲ್ ಫೋನ್ ಗಳು ಸೇರಿದಂತೆ ಒಟ್ಟು 2.5 ಲಕ್ಷ ರೂಪಾಯಿ ಮೌಲ್ಯದ ವಸ್ತು ಜಪ್ತಿ ಮಾಡಿದ್ದಾರೆ.
ವಿಷ್ಣು ಬಿನ್ ಶಿವಕುಮಾರ್ ಮತ್ತು ಸಂತಮಿಲ್ ಬಂಧಿತ ಆರೋಪಿಗಳು. ಈ ಆರೋಪಿಗಳು ಪೊಲೀಸ್ ಠಾಣಾ ವ್ಯಾಪ್ತಿಯ ಬಳಿ ರಾತ್ರಿ ವೇಳೆ ಒಬ್ಬಂಟಿಯಾಗಿ ಓಡಾಡುವರನ್ನು ಹಿಂಬಾಲಿಸಿ ಅವರಿಗೆ ಚಾಕು ಚೂರಿ ತೋರಿಸಿ ಸುಲಿಗೆ ಮಾಡುತ್ತಿದ್ದರು. ಈ ಸಂಬಂಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರಿನ ಹಿನ್ನೆಲೆ ಕಾರ್ಯೋನ್ಮುಖರಾದ ಪೂರ್ವ ವಿಭಾಗ ಡಿಸಿಪಿ ಶರಣಪ್ಪ ನೇತೃತ್ವದ ತಂಡ ಆರೋಪಿಗಳನ್ನು ಹೆಡೆಮುರಿಕಟ್ಟಿದ್ದಾರೆ.
ಬಂಧಿತ ಆರೋಪಿಗಳಿಂದ 4 ದ್ವಿಚಕ್ರವಾಹನ, 40 ವಿವಿಧ ಕಂಪನಿಯ ಮೊಬೈಲ್ ಫೋನ್ಗಳು ಸೇರಿದಂತೆ ಒಟ್ಟು 2.5 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಸದ್ಯ ಆರೋಪಿಗಳ ವಿರುದ್ಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ, ರಾಮಮೂರ್ತಿ ನಗರ ಠಾಣೆಯಲ್ಲಿ 1 ಪ್ರಕರಣ, ಮಹದೇವಪುರ ಠಾಣೆಯಲ್ಲಿ 2 ಕಳ್ಳತನ ಪ್ರಕರಣಗಳು ದಾಖಲಾಗಿದ್ದು, ತನಿಖೆ ಮುಂದುವರೆದಿದೆ.