ಕರ್ನಾಟಕ

karnataka

ETV Bharat / state

ಬೆಂಗಳೂರಲ್ಲಿ ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಪ್ರಕರಣ: ತನಿಖೆ ಚುರುಕುಗೊಳಿಸಿದ ಪೊಲೀಸರು - ವಿಶೇಷ ತಂಡ ರಚಿಸಿ

ಶುಕ್ರವಾರ ರಾಜ್ಯಾದ್ಯಂತ ಸಂಚಲನ ಮೂಡಿಸಿರುವ ಹುಸಿ ಬಾಂಬ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

Hoax bomb threat case  Police intensify investigation  Hoax bomb news  ಹುಸಿ ಬಾಂಬ್ ಬೆದರಿಕೆ ಪ್ರಕರಣ  ತನಿಖೆ ಚುರುಕು  ರಾಜ್ಯಾದ್ಯಂತ ಸಂಚಲನ  ಹುಸಿ ಬಾಂಬ್ ಬೆದರಿಕೆ  60 ಶಾಲೆಗಳಿಗೆ ಹುಸಿ ಬಾಂಬ್ ಕರೆ  ವಿಶೇಷ ತಂಡ ರಚಿಸಿ  ಇಮೇಲ್​ನ ಐಪಿ ಅಡ್ರೆಸ್ ಟ್ರೆಸ್
ತನಿಖೆ ಚುರುಕುಗೊಳಿಸಿದ ಪೊಲೀಸರು

By ETV Bharat Karnataka Team

Published : Dec 2, 2023, 9:20 AM IST

ಬೆಂಗಳೂರು: ರಾಜಧಾನಿ ಹಾಗೂ ಗ್ರಾಮಾಂತರ ಜಿಲ್ಲೆ‌ ಸೇರಿ 60 ಶಾಲೆಗಳಿಗೆ ಹುಸಿ ಬಾಂಬ್ ಕರೆ ಸಂಬಂಧ ಆಯಾ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಹುಸಿ ಬಾಂಬ್ ಇಮೇಲ್ ಸಂದೇಶ‌ ಎಲ್ಲಿಂದ ಬಂದಿದೆ? ಎಂಬುದರ ಬಗ್ಗೆ ಪತ್ತೆ ಹಚ್ಚುವ ಕಾಯಕದಲ್ಲಿ ಪೊಲೀಸರು ತೊಡಗಿಸಿಕೊಂಡಿದ್ದಾರೆ.

ವಿಶೇಷ ತಂಡ ರಚಿಸಿ ಇಮೇಲ್​ನ ಐಪಿ ಅಡ್ರೆಸ್ ಟ್ರೇಸ್ ಮಾಡುತ್ತಿದ್ದಾರೆ. ಈಗಾಗಲೇ ಸರ್ವರ್ ಪ್ರೊವೈಡರ್​ಗಳಿಗೆ ಪತ್ರ ಬರೆದು ಮಾಹಿತಿ ಕೇಳಿದ್ದಾರೆ. ತನಿಖೆ ಕೈಗೊಂಡಿರುವ ಸ್ಥಳೀಯ ಪೊಲೀಸರು ಇಮೇಲ್ ರಿಜಿಸ್ಟ್ರೇಷನ್, ಲಾಗಿನ್ ಐಪಿ ಮಾಹಿತಿ, ಇಮೇಲ್ ಡ್ರಾಫ್ಟ್ ಮಾಹಿತಿ, ಸೆಂಡ್ ಫೋಲ್ಡರ್ ಮತ್ತು ಇಮೇಲ್ ಚಾಟ್ ಹಿಸ್ಟರಿ ಸೇರಿದಂತೆ ಇನ್ನಿತರ ಮಾಹಿತಿ ನೀಡುವಂತೆ ಗೂಗಲ್‌ಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.

ಈ ಹಿಂದೆ ಕೂಡ ಹಲವು ಬಾರಿ ಇದೇ ರೀತಿ ಬಾಂಬ್ ಬೆದರಿಕೆ ಇ-ಮೇಲ್ ಕೇಸ್​ಗಳು ದಾಖಲಾಗಿವೆ. 2022ರ ಏಪ್ರಿಲ್‌ನಲ್ಲಿ ಏಳು ಶಾಲೆಗಳಿಗೆ ಬಾಂಬ್ ಬೆದರಿಕೆ ಮೇಲ್ ಬಂದಿದ್ದವು. ಹೆಣ್ಣೂರು, ಹೆಬ್ಬಗೋಡಿ ಠಾಣಾ ವ್ಯಾಪ್ತಿಯಲ್ಲಿ ಏಳು ಖಾಸಗಿ ಶಾಲೆಗಳಿಗೆ ಬಾಂಬ್ ಇಟ್ಟಿರುವುದಾಗಿ ದುಷ್ಕರ್ಮಿಗಳು ಬೆದರಿಕೆ ಹಾಕಿದ್ದರು. ತನಿಖೆ ವೇಳೆ ಹುಸಿ ಬಾಂಬ್ ಕರೆ ಎಂದು ಬೆಳಕಿಗೆ ಬಂದಿತ್ತು. ಅಲ್ಲದೆ 2020ರ ಜುಲೈನಲ್ಲಿ ಡಿಕೆಶಿ ಒಡೆತನದ ಆರ್​ಆರ್ ನಗರದ ಠಾಣಾ ವ್ಯಾಪ್ತಿಯ ಶಾಲೆಗೆ ಹುಸಿ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು. ಈ ಸಂಬಂಧ ತನಿಖೆ ನಡೆಸಿದ್ದ ಪೊಲೀಸರು ಅದೇ ಶಾಲೆಯ ವಿದ್ಯಾರ್ಥಿಯೊಬ್ಬನಿಂದ ಇಮೇಲ್ ಬಂದಿರುವುದನ್ನು ಪತ್ತೆ ಹಚ್ಚಲಾಗಿತ್ತು. ಆಗ ಪೊಲೀಸರು ಈ ಪ್ರಕರಣವನ್ನ ಬಗೆಹರಿಸಿದ್ದರು.

ಓದಿ:ಹುಸಿ ಬಾಂಬ್ ಬೆದರಿಕೆ ಪ್ರಕರಣ: ಮೇಲ್ನೋಟಕ್ಕೆ ಇದು ಕಿಡಿಗೇಡಿಗಳ ಕೃತ್ಯದಂತಿದೆ.. ಪೊಲೀಸ್ ಕಮೀಷನರ್ ದಯಾನಂದ

ಹುಸಿ ಬಾಂಬ್​ ಬೆದರಿಕೆ ಬಂದ ಶಾಲೆಗಳು :ಬನ್ನೇರುಘಟ್ಟ ಸಮೀಪದ ದಿನ್ನೇಪಾಳ್ಯದ ಗ್ರೀನ್ ಹುಡ್ ಹೈಸ್ಕೂಲ್, ಗ್ಲೋಬಲ್ ಇಂಟರ್​ ನ್ಯಾಷನಲ್​ ಶಾಲೆ, ರಾಯನ್ ಇಂಟರ್ನ್ಯಾಷನಲ್ ಶಾಲೆ, ಆಲ್ ಬಷೀರ್ ಶಾಲೆ, ದೀಕ್ಷಾ ಹೈಟ್‌ ಶಾಲೆ, ಕಾಂಡರ್ ಇಂಟರ್ನ್ಯಾಷನಲ್ ಶಾಲೆ ಮತ್ತು ಬಿವಿಎಂ ಗ್ಲೋಬಲ್ ಶಾಲೆಗೆ ಹುಸಿ ಬಾಂಬ್ ಕರೆ ರವಾನೆಯಾದರೆ, ಹೆಬ್ಬಗೋಡಿಯ ಡಿವೈನ್ ಇಂಟರ್ನ್ಯಾಷನಲ್ ಶಾಲೆ, ಟ್ರೀಮೈಸ್‌ ಇಂಟರ್ನ್ಯಾಷನಲ್ ಶಾಲೆ, ಫ್ಲಾರೆನ್ಸ್ ಇಂಟರ್ನ್ಯಾಷನಲ್ ಶಾಲೆ, ಎಬೆನ್ಸರ್ ಇಂಟರ್ನ್ಯಾಷನಲ್ ಶಾಲೆ ಸೇರಿ ಸೇರಿ ಇಲ್ಲಿ ಒಟ್ಟು ನಾಲ್ಕು ಶಾಲೆಗಳಿಗೆ ಹುಸಿ ಬಾಂಬ್ ಕರೆ ಬಂದಿದೆ.

ಸರ್ಜಾಪುರದಗ್ರೀನ್ ಹುಡ್ ಇಂಟರ್ನ್ಯಾಷನಲ್ ಹೈಸ್ಕೂಲ್, ಗ್ಲೋಬಲ್ ಇಂಡಿಯನ್ ಇಂಟರ್ನ್ಯಾಷನಲ್ ಶಾಲೆ, ಓಕರಿಡ್ಜ್ ಶಾಲೆ, ಟಿಐಎಸ್​ಬಿ ಶಾಲೆ, ಇನ್ವೆಂಚರ್ ಅಕಾಡೆಮಿ, ಜಿಗಣಿಯಅಚೀವರ್ಸ್ ಅಕಾಡೆಮಿ ಮತ್ತು ಎನ್ಡೆವರ್ಸ್ ಅಕಾಡೆಮಿ ಶಾಲೆಗೆ ಹುಸಿ ಬಾಂಬ್ ಕರೆ ಬಂದಿದೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ. ಆನೇಕಲ್​ ತಾಲೂಕಿನ 18 ಶಾಲೆ ಸೇರಿ ಒಟ್ಟು 60ಕ್ಕೂ ಹೆಚ್ಚು ಶಾಲೆಗಳಿಗೆ ಇಮೇಲ್ ಮೂಲಕ ಹುಸಿ ಬಾಂಬ್ ಬೆದರಿಕೆ ಕರೆ ಬಂದಿದೆ.

ABOUT THE AUTHOR

...view details