ಕರ್ನಾಟಕ

karnataka

ETV Bharat / state

ಇಂದು ಬೆಂಗಳೂರು ವಕೀಲರ ಸಂಘದ ಚುನಾವಣೆ : ಅಧ್ಯಕ್ಷಗಾದಿಗೆ ತೀವ್ರ ಪೈಪೋಟಿ - ಬೆಂಗಳೂರು ಸಿಟಿ ಸಿವಿಲ್ ಕೋರ್ಟ್

ಏಷ್ಯಾದಲ್ಲೇ ಅತಿ ದೊಡ್ಡ ಬೆಂಗಳೂರು ವಕೀಲರ ಸಂಘಕ್ಕೆ ಇಂದು ಚುನಾವಣೆ ನಡೆಯಲಿದೆ. ಸಂಘದ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ, ಖಜಾಂಚಿ ಹುದ್ದೆಗೆ ಅಲ್ಲದೇ, ಹೈಕೋರ್ಟ್​​​ನ 7 ಮೇಯೋ ಹಾಲ್ ಮತ್ತು ಮ್ಯಾಜಿಸ್ಟ್ರೇಟ್ ಕೋರ್ಟ್ ಘಟಕದ ತಲಾ 5, ಸಿಟಿ ಸಿವಿಲ್ ಕೋರ್ಟ್​​​ನ 12 ಕಾರ್ಯಕಾರಿ ಸಮಿತಿ ಸದಸ್ಯರ ಸ್ಥಾನಗಳಿಗೆ ಏಕಕಾಲದಲ್ಲಿ ಮತದಾನ ನಡೆಯಲಿದೆ.

bengaluru-lawyers-association-election-today
ಬೆಂಗಳೂರು ವಕೀಲರ ಸಂಘದ ಚುನಾವಣೆ

By

Published : Dec 19, 2021, 7:10 AM IST

ಬೆಂಗಳೂರು:ನಗರದ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಏಷ್ಯಾದಲ್ಲೇ ಅತಿ ದೊಡ್ಡ ಬೆಂಗಳೂರು ವಕೀಲರ ಸಂಘಕ್ಕೆ ಇಂದು ಚುನಾವಣೆ ನಡೆಯಲಿದೆ. ಬೆಳಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದ್ದು, ಅಧ್ಯಕ್ಷಗಾದಿಗೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ಅಧ್ಯಕ್ಷ ಹುದ್ದೆಗೆ ಹಾಲಿ ಅಧ್ಯಕ್ಷ ಎ.ಪಿ ರಂಗನಾಥ್, ಹಿರಿಯ ವಕೀಲ ವಿವೇಕ್ ಸುಬ್ಬಾರೆಡ್ಡಿ, ಎಎಬಿ ಮಾಜಿ ಅಧ್ಯಕ್ಷ ಹೆಚ್.ಸಿ ಶಿವರಾಮು ಹಾಗೂ ಆರ್. ರಾಜಣ್ಣ ನಡುವೆ ತೀವ್ರ ಸ್ಪರ್ಧೆ ನಡೆಯಲಿದೆ.

ಸಂಘದ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ, ಖಜಾಂಚಿ ಹುದ್ದೆಗೆ ಅಲ್ಲದೇ, ಹೈಕೋರ್ಟ್​​​ನ 7 ಮೆಯೋ ಹಾಲ್ ಮತ್ತು ಮ್ಯಾಜಿಸ್ಟ್ರೇಟ್ ಕೋರ್ಟ್ ಘಟಕದ ತಲಾ 5, ಸಿಟಿ ಸಿವಿಲ್ ಕೋರ್ಟ್​​​ನ 12 ಕಾರ್ಯಕಾರಿ ಸಮಿತಿ ಸದಸ್ಯರ ಸ್ಥಾನಗಳಿಗೆ ಏಕಕಾಲದಲ್ಲಿ ಮತದಾನ ಜರುಗಲಿದೆ. ವಕೀಲ ಮತದಾರರು ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಹಾಗೂ ಖಜಾಂಚಿಗೆ ಮತ ಹಾಕುವ ಜತೆಗೆ ತಮ್ಮ ತಮ್ಮ ಘಟಕಗಳಲ್ಲಿನ ಕಾರ್ಯಕಾರಿ ಸಮಿತಿ ಸದಸ್ಯರ ಆಯ್ಕೆಗೆ ಹಕ್ಕು ಚಲಾಯಿಸಲಿದ್ದಾರೆ.

ಈ ಬಾರಿ ಮತದಾನಕ್ಕೆ ಇವಿಎಂ ಯಂತ್ರಗಳನ್ನು ಬಳಸಲಾಗುತ್ತಿದ್ದು, ಸುಗಮ ಮತದಾನಕ್ಕೆ ಕಟ್ಟಿನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಂಘದ ನಾಲ್ಕು ಘಟಕಗಳಿಂದ ಒಟ್ಟು 16,568 ವಕೀಲರು ಮತದಾನ ಮಾಡಲಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ನಾಲ್ವರು ವಕೀಲರು ಸ್ಪರ್ಧಿಸಿದ್ದರೆ, ಪ್ರಧಾನ ಕಾರ್ಯದರ್ಶಿ ಹುದ್ದೆಗೆ 8 ಮಂದಿ ಅಖಾಡದಲ್ಲಿದ್ದಾರೆ. ಖಜಾಂಚಿ ಸ್ಥಾನಕ್ಕೆ 10 ಮಂದಿ ಅಖಾಡಕ್ಕಿಳಿದಿದ್ದರೆ, 29 ಆಡಳಿತ ಮಂಡಳಿ ಸದಸ್ಯ ಸ್ಥಾನಕ್ಕೆ 112 ಮಂದಿ ಕಣಕ್ಕಿಳಿದಿದ್ದಾರೆ. ಸಂಘದ ಒಟ್ಟು 32 ಸ್ಥಾನಗಳಿಗೆ 134 ವಕೀಲರು ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ಸಂಚಾರ ಮಾರ್ಗ ಬದಲಾವಣೆ:

ವಕೀಲರ ಸಂಘದ ಚುನಾವಣೆ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕೆ ಯಾವುದೇ ರೀತಿಯ ಅಡಚಣೆಯಾಗದಂತೆ ಪ್ರಮುಖ ಮಾರ್ಗಗಳಲ್ಲಿ ನಗರ ಸಂಚಾರಿ ಪೊಲೀಸರು ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ. ಬೆಳಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಸಿಟಿ ಸಿವಿಲ್ ಕೋರ್ಟ್ ಮುಂಭಾಗದ (ಹಳೆ ಅಂಚೆ ಕಚೇರಿ) ರಸ್ತೆಯಲ್ಲಿ ಸಾರ್ವಜನಿಕರ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಸಿಟಿ ಸಿವಿಲ್ ಕೋರ್ಟ್ ಮುಂಭಾಗದ ರಸ್ತೆಯಲ್ಲಿ ವಕೀಲರ ಸಂಘದ ಚುನಾವಣೆಗೆ ಮತ ಹಾಕಲು ಬರುವ ವಕೀಲರಿಗೆ ಹಾಗೂ ಚುನಾವಣಾ ಅಧಿಕಾರಿಗಳಿಗೆ ಮತ್ತು ಪೊಲೀಸ್ ಅಧಿಕಾರಿಗಳು ಮಾತ್ರ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ. ಉಳಿದಂತೆ ಸಾರ್ವಜನಿಕರ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ.

ಇದನ್ನೂ ಓದಿ:ನಾಳೆ ವಕೀಲರ ಸಂಘದ ಚುನಾವಣೆ: ಬೆಂಗಳೂರಿನ ಈ ಮಾರ್ಗಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ವ್ಯವಸ್ಥೆ

ABOUT THE AUTHOR

...view details