ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚುನಾವಣೆ ಸಂಬಂಧ ಸಮಾಲೋಚನೆ ನಡೆಸಿದರು.
ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ತೆರಳಿದ್ದ ನಿಖಿಲ್ ಕುಮಾರಸ್ವಾಮಿ ಮಂಡ್ಯ ಕ್ಷೇತ್ರದಲ್ಲಿ ತಮ್ಮ ಪರ ಪ್ರಚಾರಕ್ಕೆ ಬರುವಂತೆ ಸಿದ್ದರಾಮಯ್ಯನವರಿಗೆ ಆಹ್ವಾನ ನೀಡಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನಿಖಿಲ್ಗೆ ಎದುರಾಳಿಯಾಗಿ ಹಿರಿಯ ಸುಮಲತಾ ಸ್ಪರ್ಧಿಸಿದ್ದು, ಅವರಿಗೆ ಬಿಜೆಪಿ, ರೈತ ಸಂಘದ ಬೆಂಬಲ ಸಿಕ್ಕಿದೆ. ಹಾಗಾಗಿ ಈ ಕ್ಷೇತ್ರ ಜಿದ್ದಾಜಿದ್ದಿಯ ಕಣವಾಗಿದೆ. ಇನ್ನು ಮಂಡ್ಯ ಜಿಲ್ಲೆಯ ಕೆಲ ಕಾಂಗ್ರೆಸ್ ಮುಖಂಡರು ಸುಮಲತಾ ಅವರಿಗೆ ಪರೋಕ್ಷ ಬೆಂಬಲ ನೀಡಿದ್ದಾರೆ.