ಬೆಂಗಳೂರು:ಮನೆಗಳ್ಳತನ ಸೇರಿದಂತೆ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ 16 ಮಂದಿ ಆರೋಪಿಗಳನ್ನು ನಗರ ಪಶ್ಚಿಮ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 64 ಲಕ್ಷ ರೂ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಲಾಗಿದೆ.
ಮಾಗಡಿ ರೋಡ್, ಗೋವಿಂದರಾಜನಗರ, ಕಾಮಾಕ್ಷಿಪಾಳ್ಯ, ವಿಜಯನಗರ ಠಾಣೆ ವ್ಯಾಪ್ತಿಗಳಲ್ಲಿ ಆರೋಪಿಗಳು ಮನೆಕಳ್ಳತನ, ಚಿನ್ನಾಭರಣ, ಬೈಕ್ ಕಳ್ಳತನ ಕೃತ್ಯಗಳಲ್ಲಿ ಭಾಗಿಯಾಗಿದ್ದರು. ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಸ್ತೆಯಲ್ಲಿ ಫೋನ್ನಲ್ಲಿ ಮಾತನಾಡಿಕೊಂಡು ಹೋಗುತ್ತಿದ್ದ ಸಾರ್ವಜನಿಕರ ಮೊಬೈಲ್ ಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇವರಿಂದ 30 ಲಕ್ಷ ರೂ ಮೌಲ್ಯದ 204 ಮೊಬೈಲ್, ಎರಡು ದ್ಚಿಚಕ್ರ ವಾಹನ ವಶಕ್ಕೆ ಪಡೆದುಕೊಳ್ಳಲಾಗಿದೆ.