ಬೆಂಗಳೂರು: ಪೊಲೀಸ್ ಠಾಣೆಯ ಬಳಿ ಗಲಭೆ ಸೃಷ್ಟಿ ಮಾಡಿರುವ ಕುರಿತು ಸದ್ಯ ಕೆಜಿ ಹಳ್ಳಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮಂಗಳವಾರ ರಾತ್ರಿ ಏನೆಲ್ಲಾನಡೆಯಿತು ಅನ್ನೋದನ್ನ ಎಳೆ ಎಳೆಯಾಗಿ ಪೊಲೀಸರು ಎಫ್ಐಆರ್ನಲ್ಲಿನಮೂದು ಮಾಡಿದ್ದಾರೆ.
ಗಲಭೆಕೋರರನ್ನು ತಡೆಯಲು ಮುಂದಾಗಿದ್ದ ಪಿಎಸ್ಐ ರಾಜೇಶ್ ಹಾಗೂ ಸಿಬ್ಬಂದಿ ಮಂಜುನಾಥ್ ಅವರನ್ನು ಹತ್ಯೆ ಮಾಡಲು ಮುಂದಾಗಿದ್ದ ಹಂತಕರನ್ನು ಹತ್ತಿಕ್ಕಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ.
ಪೊಲೀಸ್ ಠಾಣೆ ಹಾಗೂ ವಾಹನಗಳ ಮೇಲೆ ದಾಳಿ ನಡೆಸಿದ ಸುಮಾರು 800 ಮಂದಿ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಸಹಿತ ಠಾಣೆಗೆ ನುಗ್ಗಲು ಯತ್ನಿಸಿದ್ದಾರೆ. ಪರಿಸ್ಥಿತಿ ಬಿಗಡಾಯಿಸುತ್ತಿದ್ದಂತೆ ಹಿರಿಯ ಅಧಿಕಾರಿಗಳ ಗಮನಕ್ಕೆ ವಿಚಾರ ತಿಳಿಸಲಾಗುತ್ತದೆ. ಇನ್ನು ಸ್ಥಳದಲ್ಲಿದ್ದ ಗುಂಪು ಚದುರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೂ ಕ್ಯಾರೇ ಎನ್ನದ ಕಿಡಿಗೇಡಿಗಳು ಪೊಲೀಸರ ಆಯುಧಗಳನ್ನು ಕಸಿಯಲು ಮುಂದಾಗಿದ್ದಾರೆ. ಈ ವೇಳೆ ಪೊಲೀಸರು ಆತ್ಮರಕ್ಷಣೆಗಾಗಿ ಗುಂಪಿನ ಮೇಲೆ ಗುಂಡು ಹಾರಿಸಿದ್ದಾರೆ.
ಕೆಜಿ ಹಳ್ಳಿ ಠಾಣೆಯಲ್ಲಿ ಎಫ್ಐಆರ್ ದಾಖಲು ಕೆಜಿ ಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಕಂಪ್ಲೀಟ್ ಡೀಟೇಲ್ಸ್ :
ಕೆಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 143, 147, 148, 353, 333, 323, 436, 427, 148 ಹಾಗೂ ಸಾರ್ವಜನಿಕ ಆಸ್ತಿಪಾಸ್ತಿ ಹಾನಿ-1984 ಅಡಿ ದೂರು ದಾಖಲಿಸಲಾಗಿದೆ. ಈ ಸೆಕ್ಷನ್ಗಳ ಅನ್ವಯ ಒಟ್ಟು 17 ಜನ ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳಲು ಮುಂದಾಗಿದ್ದಾರೆ. ಪ್ರಮುಖವಾಗಿ ಅಬ್ಬಾಸ್ A1, ಫಿರೋಜ್ A2, ಮುಜಾಮಿಲ್A3, ಹಬೀಬ್ A4, ಪೀರ್ ಪಾಷಾ A5 ಸೇರಿದಂತೆ 17 ಜನ ಎಸ್ಡಿಪಿಐ ಸಂಘಟನೆಯವರ ಮೇಲೆ ಎಫ್ಐಆರ್ ದಾಖಲಾಗಿದೆ. ಇನ್ಸ್ಪೆಕ್ಟರ್ ಅಜಯ್ ಸಾರಥಿ ಈ ಪ್ರಕರಣದ ದೂರುದಾರರಾಗಿದ್ದಾರೆ.