ಕರ್ನಾಟಕ

karnataka

ETV Bharat / state

ಮಾಸ್ಕ್, ಬೂಸ್ಟರ್ ಡೋಸ್ ಕಡ್ಡಾಯಗೊಳಿಸಿ ಬೆಂಗಳೂರು ವಿವಿ ಆದೇಶ - ಮಾಸ್ಕ್ ಕಡ್ಡಾಯ

ದೇಶದಲ್ಲಿ ಮತ್ತೆ ಕೊರೊನಾ ಭೀತಿ ಶುರುವಾಗಿದೆ. ಬೆಂಗಳೂರು ವಿವಿಯು ಮಾಸ್ಕ್, ಬೂಸ್ಟರ್ ಡೋಸ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ.

ಬೆಂಗಳೂರು ವಿವಿ
ಬೆಂಗಳೂರು ವಿವಿ

By

Published : Dec 23, 2022, 4:12 PM IST

ಬೆಂಗಳೂರು: ಚೀನಾ ದೇಶ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ. ಅಂತಾರಾಷ್ಟ್ರೀಯ ಪ್ರಯಾಣಿಕರು ಹೆಚ್ಚಾಗಿ ಬೆಂಗಳೂರಿಗೆ ಆಗಮಿಸುತ್ತಿದ್ದು ಮುನ್ನೆಚ್ಚರಿಕೆ ಅತ್ಯಗತ್ಯವಾಗಿದೆ. ಅಂತೆಯೇ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಕೋವಿಡ್ ನಿಯಮಾವಳಿಯನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದಿದೆ.

ಬೆಂಗಳೂರು ವಿವಿಯಲ್ಲಿ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಗೆ ಮಾಸ್ಕ್ ಕಡ್ಡಾಯಗೊಳಿಸಿದ್ದು, ಬೂಸ್ಟರ್ ಡೋಸ್ ಪಡೆಯುವಂತೆ ಸೂಚನೆ ನೀಡಲಾಗಿದೆ. ಈ ಬಗ್ಗೆ ಕೊರೊನಾ ಮಾರ್ಗಸೂಚಿ ಪಾಲಿಸಲು ಬೆಂವಿವಿ ಕುಲಸಚಿವ ಸುತ್ತೋಲೆ ಹೊರಡಿಸಿದ್ದಾರೆ.

ರಾಜ್ಯ ಸರ್ಕಾರ ಈವರೆಗೂ ಮಾಸ್ಕ್ ಕಡ್ಡಾಯ ಸೇರಿದಂತೆ ಯಾವುದೇ ರೀತಿಯ ಕೋವಿಡ್ ಮುನ್ನೆಚ್ಚರಿಕೆ ಕ್ರಮಕ್ಕೆ ಮುಂದಾಗಿಲ್ಲ. ಆದರೆ ಬೆಂಗಳೂರು ವಿಶ್ವವಿದ್ಯಾಲಯ ದಿಢೀರ್ ಇಂಥದ್ದೊಂದು ಸುತ್ತೋಲೆ ಹೊರಡಿಸಿರುವುದು ಅಚ್ಚರಿ ಮೂಡಿಸಿದೆ. ಅಲ್ಲದೇ ಕೆಲ ವಿದ್ಯಾರ್ಥಿಗಳಲ್ಲಿ ಇದು ಗೊಂದಲವನ್ನೂ ಸೃಷ್ಟಿಸಿದೆ.

ಕೋವಿಡ್ ಮೊದಲ ಹಾಗೂ ಎರಡನೇ ಅಲೆಯ ವೇಳೆ ಮುನ್ನೆಚ್ಚರಿಕೆ ಲೋಪದಿಂದ ಸಾಕಷ್ಟು ಸಾವು, ನೋವು ಸಂಭವಿಸಿದ್ದವು. ಇದು ಮರುಕಳಿಸದಿರಲಿ ಎಂದು ಸರ್ಕಾರವೂ ಕೂಡಾ ಎಚ್ಚರಿಕೆ ವಹಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: ಬೆಂಗಳೂರು, ರಾಜ್ಯಕ್ಕೆ ಪ್ರತ್ಯೇಕ ಕೋವಿಡ್ ಮಾರ್ಗಸೂಚಿ ಬಗ್ಗೆ ನಾಳೆ ನಿರ್ಧಾರ

ABOUT THE AUTHOR

...view details