ಬೆಂಗಳೂರು: ಒಂದೇ ಸೆಮಿಸ್ಟರ್ನಲ್ಲಿ ಪರೀಕ್ಷೆ ನಡೆಸುವಂತೆ ಒತ್ತಾಯಿಸಿ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಂದ ಜ್ಞಾನಭಾರತಿ ಚಲೋ ನಡೆಸಲಾಯಿತು. ಇದರಲ್ಲಿ ನೂರಾರು ವಿದ್ಯಾರ್ಥಿಗಳು ಯೂನಿವರ್ಸಿಟಿ ಗೇಟ್ನಿಂದ ಮೆರವಣಿಗೆ ನಡೆಸಿದರು.
ಒಂದೇ ಸೆಮಿಸ್ಟರ್ನಲ್ಲಿ ಪರೀಕ್ಷೆ ನಡೆಸುವಂತೆ ಪಿಜಿ ವಿದ್ಯಾರ್ಥಿಗಳ ಒತ್ತಾಯ
ಅತ್ಯಂತ ಕಡಿಮೆ ಅವಧಿಯಲ್ಲಿ 2 ಸೆಮಿಸ್ಟರ್ ಪರೀಕ್ಷೆ ಬರೆಯುವುದು ಒತ್ತಡ ಹಾಗೂ ಆತಂಕವನ್ನು ಸೃಷ್ಟಿ ಮಾಡಿದೆ. ಹೀಗಾಗಿ ಒಂದೇ ಸೆಮಿಸ್ಟರ್ನಲ್ಲಿ ಪರೀಕ್ಷೆ ನಡೆಸುವಂತೆ ಒತ್ತಾಯಿಸಿ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.
ರಾಜ್ಯ ಸರ್ಕಾರವೂ ಯುಜಿಸಿ ಮಾರ್ಗಸೂಚಿ ಅನುಸರಿಸಿ ತನ್ನ ನಿರ್ಧಾರವನ್ನು ಪ್ರಕಟ ಮಾಡಿ, ಸುತ್ತೋಲೆ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಅಂತಿಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ 2 ಸೆಮಿಸ್ಟರ್ ಪರೀಕ್ಷೆ ಎದುರಿಸುವ ಸಂದರ್ಭ ಬಂದಿದೆ. ಅತ್ಯಂತ ಕಡಿಮೆ ಅವಧಿಯಲ್ಲಿ 2 ಸೆಮಿಸ್ಟರ್ ಪರೀಕ್ಷೆ ಬರೆಯುವುದು ಒತ್ತಡ ಹಾಗೂ ಆತಂಕವನ್ನು ಸೃಷ್ಟಿ ಮಾಡಿದೆ. ಹೀಗಾಗಿ, ಬೆಂಗಳೂರು ವಿವಿಯ ಕುಲಪತಿಗಳಿಗೆ ನಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಲಿದ್ದೇವೆ ಎಂದು ವಿದ್ಯಾರ್ಥಿಗಳು ತಿಳಿಸಿದರು.
ಬೆಂಗಳೂರು ವಿವಿಯ ಅಂತಿಮ ವರ್ಷದ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೂ ಯುಜಿಸಿ ಮಾರ್ಗಸೂಚಿ ಅನುಸರಿಸಬೇಕು. ಒಂದೇ ಸೆಮಿಸ್ಟರ್ ಪರೀಕ್ಷೆಯನ್ನು ನಡೆಸಿ ಅಂತ ಮರವಣಿಗೆ ನಡೆಸುವ ಮೂಲಕ ಘೋಷಣೆ ಕೂಗಿದರು.