ಬೆಂಗಳೂರು: ಕೊರೊನಾ ವಾರಿಯರ್ಸ್ ಆಗಿ ಕೆಲಸ ಮಾಡುತ್ತಿರುವ ಪೊಲೀಸರಿಗೆ ಸೋಂಕು ಹೆಚ್ಚಾಗಿ ಕಾಣುತ್ತಿದ್ದು, ಇಂದು ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ಗೆ ಕೋವಿಡ್-19 ದೃಢಪಟ್ಟಿದೆ.
ರಾಜರಾಜೇಶ್ವರಿ ನಗರ ಠಾಣೆಯಲ್ಲಿ ಹೆಡ್ ಕಾನ್ಸ್‌ಟೇಬಲ್ ಆಗಿ ಕಾರ್ಯನಿರ್ವಹಣೆ ಮಾಡುವ ವ್ಯಕ್ತಿ ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ಸ್ಥಳೀಯ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದರು. ಈ ವೇಳೆ, ಅವರ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿದ್ದು,
ಕೊರೊನಾ ಪಾಸಿಟಿವ್ ಬಂದಿದೆ. ಹೀಗಾಗಿ ಅವರನ್ನು ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.