ಬೆಂಗಳೂರು: ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಭಾನುವಾರದ ಲಾಕ್‌ಡೌನ್ ಬಹಳ ಕಠಿಣವಾಗಿ ಜಾರಿಗೊಳಿಸಲಾಗಿದೆ.
ಸಂಡೇ ಲಾಕ್‌ಡೌನ್ ಎಫೆಕ್ಟ್.. ಬಿಕೋ ಎನ್ನುತ್ತಿರುವ ನಗರದ ರಸ್ತೆಗಳು
ಅಗತ್ಯ ಸೇವೆಗಳಿಗೆ ಮಧ್ಯಾಹ್ನದವರೆಗೆ ಮಾತ್ರ ಅನುಮತಿ ನೀಡಿದ್ದು, ರಸ್ತೆ ಬದಿಯ ವ್ಯಾಪಾರಸ್ಥರು ತಮ್ಮ ವ್ಯಾಪಾರವನ್ನು ಸ್ಥಗಿತಗೊಳಿಸಿದ್ದಾರೆ..
Benglure
ನಗರದ ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್ ಅಳವಡಿಕೆ ಮಾಡಲಾಗಿದೆ. ಅಡ್ಡ ರಸ್ತೆಗಳಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ. ರಾಜಾಜಿನಗರ, ಹೆಬ್ಬಾಳ, ಮಲ್ಲೇಶ್ವರಂ, ಕೋರಮಂಗಲದ ಬಹುತೇಕ ಕಡೆಗಳಲ್ಲಿ ಪೊಲೀಸರು ಅನಗತ್ಯ ಓಡಾಡುವ ವಾಹನಗಳನ್ನು ಜಪ್ತಿ ಮಾಡುತ್ತಿದ್ದಾರೆ.
ಅಗತ್ಯ ಸೇವೆಗಳಿಗೆ ಮಧ್ಯಾಹ್ನದವರೆಗೆ ಮಾತ್ರ ಅನುಮತಿ ನೀಡಿದ್ದು, ರಸ್ತೆ ಬದಿಯ ವ್ಯಾಪಾರಸ್ಥರು ತಮ್ಮ ವ್ಯಾಪಾರವನ್ನು ಸ್ಥಗಿತಗೊಳಿಸಿದ್ದಾರೆ. ಕೆ ಆರ್ ಮಾರುಕಟ್ಟೆ, ಯಶವಂತಪುರ ಮಾರುಕಟ್ಟೆ ಸಹ ಸ್ತಬ್ಧವಾಗಿದೆ. ಜೊತೆಗೆ ಎಂಜಿ ರೋಡ್, ಬ್ರೀಗೆಡ್ ರಸ್ತೆ ಬಿಕೋ ಎನ್ನುತ್ತಿದೆ.