ಬೆಂಗಳೂರು: "ನನಗೆ ತೀವ್ರ ಅನಾರೋಗ್ಯ ಸಮಸ್ಯೆ ಕಾಡುತ್ತಿದೆ. ಹಾಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ, ನನ್ನನ್ನು ಕ್ಷಮಿಸಿಬಿಡಿ. ನನ್ನ ಸಾವಿಗೆ ನಾನೇ ಕಾರಣ" ಎಂದು ಡೆತ್ ನೋಟ್ ಬರೆದಿಟ್ಟು ಬಿಜಿಎಸ್ ಕಾಲೇಜಿನ ಪ್ರೊಫೆಸರ್ ಚೈತ್ರ (41) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜ್ಞಾನಭಾರತಿ ಠಾಣಾ ವ್ಯಾಪ್ತಿಯ ಕದಂಬ ಲೇಔಟ್ನಲ್ಲಿರುವ ಮನೆಯ ಸೀಲಿಂಗ್ ಫ್ಯಾನ್ಗೆ ನೇಣು ಬಿಗಿದುಕೊಂಡು ಮಹಿಳೆ ಸಾವಿಗೀಡಾಗಿದ್ದಾರೆ.
ಬೆಂಗಳೂರು: ಡೆತ್‌ನೋಟ್ ಬರೆದಿಟ್ಟು ಖಾಸಗಿ ಕಾಲೇಜು ಮಹಿಳಾ ಪ್ರೊಫೆಸರ್ ಆತ್ಮಹತ್ಯೆ - lady committed suicide in Bangalore
ನಗರದ ಖಾಸಗಿ ಕಾಲೇಜೊಂದರಲ್ಲಿ ಪ್ರೊಫೆಸರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಚೈತ್ರ ಮರಣ ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಂಗಳೂರು ಆತ್ಮಹತ್ಯೆ ಪ್ರಕರಣ
ಚೈತ್ರಾ 23 ವರ್ಷದ ಹಿಂದೆ ಗುರುಪ್ರಸಾದ್ ಎಂಬವರನ್ನು ಮದುವೆಯಾಗಿದ್ದರು. ಪತಿ ಶಿಗ್ಗಾವಿಯಲ್ಲಿ ಜಾನಪದ ವಿಶ್ವವಿದ್ಯಾನಿಲಯದಲ್ಲಿ ರಿಜಿಸ್ಟಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.ಜ್ಞಾನ ಭಾರತಿ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಖಾಸಗಿ ವಿಡಿಯೋ ಇಟ್ಟುಕೊಂಡು ಹಣಕ್ಕೆ ಡಿಮ್ಯಾಂಡ್ ಮಾಡ್ತಿದ್ದ ಪ್ರೇಮಿಗಳ ಬಂಧನ