ಕರ್ನಾಟಕ

karnataka

ETV Bharat / state

ಪಠ್ಯಪುಸ್ತಕದಿಂದ ಭಗತ್‌ ಸಿಂಗ್‌ ಗದ್ಯ ಕೈಬಿಟ್ಟಿಲ್ಲ: ಸಾರ್ವಜನಿಕ ಶಿಕ್ಷಣ ಇಲಾಖೆ ಸ್ಪಷ್ಟನೆ - ಆರ್​ಎಸ್​​ಎಸ್​ ಸಂಸ್ಥಾಪಕ ಸಂಸ್ಥಾಪಕ ಹೆಡಗೆವಾರ್

ವಾಸ್ತವವಾಗಿ 10ನೇ ತರಗತಿ ಪ್ರಥಮ ಭಾಷೆ ಕನ್ನಡ ಪಠ್ಯ ಪುಸ್ತಕದಿಂದ ಭಗತ್ ಸಿಂಗ್ ಗದ್ಯ ಪಾಠ ಕೈಬಿಟ್ಟಿಲ್ಲ. ಸದ್ಯ ಪರಿಷ್ಕರಿಸಿರುವ 10ನೇ ತರಗತಿ ಪ್ರಥಮ ಭಾಷಾ ಕನ್ನಡ ಪಠ್ಯ ಪುಸ್ತಕವು ಪ್ರಸ್ತುತ ಮುದ್ರಣ ಹಂತದಲ್ಲಿದೆ ಎಂದು ಶಿಕ್ಷಣ ಇಲಾಖೆ ಹೇಳಿದೆ.

Bhagat Singh lesson not dropped
ಭಗತ್ ಸಿಂಗ್ ಕುರಿತ ಪಾಠ ಕೈಬಿಡಲಾಗಿದೆ ಎಂಬ ವಂದತಿಗೆ ತೆರೆ

By

Published : May 17, 2022, 1:42 PM IST

ಬೆಂಗಳೂರು: 10ನೇ ತರಗತಿ (ಕನ್ನಡ ವಿಷಯ 5ನೇ ಘಟಕ) ಪಠ್ಯದಲ್ಲಿದ್ದ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಕುರಿತ ಪಾಠ ಕೈಬಿಡಲಾಗಿದೆ ಎಂಬ ವಂದತಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಗೆ ತೆರೆ ಎಳೆದಿದೆ. ಪಠ್ಯ ಪುಸ್ತಕದಿಂದ ಭಗತ್ ಸಿಂಗ್ ಗದ್ಯ ಪಾಠವನ್ನು ಕೈಬಿಟ್ಟಿಲ್ಲ ಎಂದು ಸ್ಪಷ್ಟಪಡಿಸಿದೆ.

ಭಗತ್ ಸಿಂಗ್ ಪಾಠವನ್ನು ಕೈ ಬಿಟ್ಟು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಂಸ್ಥಾಪಕ ಕೆ.ಬಿ.ಹೆಡಗೆವಾರ್ ಅವರ ಭಾಷಣವನ್ನು ಪಠ್ಯದಲ್ಲಿ ಸೇರಸಲಾಗಿದೆ. ಈ ಮೂಲಕ ಮಹಾನ್ ದೇಶಪ್ರೇಮಿ ಭಗತ್ ಸಿಂಗ್​ ಅವರಿಗೆ ರಾಜ್ಯ ಸರ್ಕಾರ ಅವಮಾನ ಮಾಡಿದೆ ಎಂದು ಆರೋಪಿಸಿ ಹಲವು ವಿದ್ಯಾರ್ಥಿ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದವು.

ಭಗತ್ ಸಿಂಗ್ ಕುರಿತ ಪಾಠ ಕೈಬಿಡಲಾಗಿದೆ ಎಂಬ ವಂದತಿಗೆ ತೆರೆ

ಸಮಾಜ ವಿಜ್ಞಾನ ಹಾಗೂ ಭಾಷಾ ಪಠ್ಯ ಪುಸ್ತಕಗಳಲ್ಲಿದ್ದ ಸೂಕ್ಷ್ಮ ವಿಚಾರಗಳನ್ನು ಪರಿಶೀಲಿಸಿ, ಪರಿಷ್ಕರಿಸಲು ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯಲ್ಲಿ ಸಮಿತಿ ನೇಮಿಸಲಾಗಿತ್ತು. ಈ ಸಮಿತಿಯು 6ರಿಂದ 10ನೇ ತರಗತಿ ಸಮಾಜ ವಿಜ್ಞಾನ ಪಠ್ಯ ಪುಸ್ತಕಗಳು ಹಾಗೂ 1ರಿಂದ 10ನೇ ತರಗತಿ ಕನ್ನಡ ಭಾಷಾ ಪಠ್ಯಪುಸ್ತಕಗಳನ್ನು ಪರಿಷ್ಕರಿಸಿದೆ.

ಭಗತ್ ಸಿಂಗ್ ಕುರಿತ ಪಾಠ ಕೈಬಿಡಲಾಗಿದೆ ಎಂಬ ವಂದತಿಗೆ ತೆರೆ

ಪ್ರಸ್ತುತ 10ನೇ ತರಗತಿ ಪ್ರಥಮ ಭಾಷೆ ಕನ್ನಡ ಪಠ್ಯ ಪುಸ್ತಕದಲ್ಲಿದ್ದ ಭಗತ್‌' ಸಿಂಗ್ ಗದ್ಯವನ್ನು ಕೈಬಿಟ್ಟು ಹೆಡಗೆವಾರ್ ಕುರಿತ ಗದ್ಯ ಸೇರಿಸಲಾಗಿದೆ ಎಂದು ಸುದ್ದಿ ಹರಡಿದಾಡುತ್ತಿದೆ. ಆದರೆ, ವಾಸ್ತವವಾಗಿ 10ನೇ ತರಗತಿ ಪ್ರಥಮ ಭಾಷೆ ಕನ್ನಡ ಪಠ್ಯ ಪುಸ್ತಕದಿಂದ ಭಗತ್ ಸಿಂಗ್ ಗದ್ಯ ಪಾಠ ಕೈಬಿಟ್ಟಿಲ್ಲ. ಸದ್ಯ ಪರಿಷ್ಕರಿಸಿರುವ 10ನೇ ತರಗತಿ ಪ್ರಥಮ ಭಾಷಾ ಕನ್ನಡ ಪಠ್ಯ ಪುಸ್ತಕವು ಪ್ರಸ್ತುತ ಮುದ್ರಣ ಹಂತದಲ್ಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಇದನ್ನೂ ಓದಿ:ಪ್ರತಿದಿನ ಬೆಳಗ್ಗೆ 5ಕ್ಕೆ ಬದಲಾಗಿ 6 ಗಂಟೆಗೆ ಅಜಾನ್ ಕೂಗಲು ಒಮ್ಮತದ ತೀರ್ಮಾನ

ABOUT THE AUTHOR

...view details