ಬೆಂಗಳೂರು:ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಪರ ಸಂಘಟನೆಗಳು ಇಂದು ಕರೆ ನೀಡಿರುವ ಭಾರತ್ ಬಂದ್ ಹಿನ್ನೆಲೆಯಲ್ಲಿ ನಗರದ ಕೆಂಪೇಗೌಡ ಬಸ್ ನಿಲ್ದಾಣದ ಸುತ್ತಮುತ್ತಲು ಪಶ್ಚಿಮ ವಿಭಾಗದ ಪೊಲೀಸರು ಬಿಗಿ ಭದ್ರತೆ ಕಲ್ಪಿಸಿದ್ದಾರೆ.
ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಯವಾಗದಂತೆ ಪೊಲೀಸರನ್ನು ನಿಯೋಜಿಸಲಾಗಿದೆ. ಬೆಳ್ಳಂಬೆಳಗ್ಗೆ ಮೆಜೆಸ್ಟಿಕ್ಗೆ ಬಂದು ಡಿಸಿಪಿ ಸಂಜೀವ್ ಪಾಟೀಲ್ ಭದ್ರತೆ ಪರಿಶೀಲಿಸಿದರು. ಈ ವೇಳೆ ಮಾತನಾಡಿ, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಕಳೆದ ರಾತ್ರಿಯಿಂದ ಬಂದೋಬಸ್ತ್ ಮಾಡಲಾಗಿದೆ ಎಂದರು.