ಬೆಂಗಳೂರು: ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ಕೆಲವು ಪೊಲೀಸರು ಮಫ್ತಿಯಲ್ಲಿ ಕೆಲಸ ನಿರ್ವಹಿಸುತ್ತಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಎಲ್ಲಾ ಪೊಲೀಸರು ಕಡ್ಡಾಯವಾಗಿ ಸಮವಸ್ತ್ರ ಧರಿಸುವಂತೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅದೇಶಿಸಿದ್ದಾರೆ.
ಕ್ರೈಂ ಸಿಬ್ಬಂದಿ ಹೊರತುಪಡಿಸಿ ಮಫ್ತಿಯಲ್ಲಿ ತಿರುಗುವ ಪೊಲೀಸರಿಗೆ ಭಾಸ್ಕರ್ ರಾವ್ ಖಡಕ್ ಎಚ್ಚರಿಕೆ - City Police Commissioner Bhaskar Rao
ಕ್ರೈಂ ಸಿಬ್ಬಂದಿ ಹೊರತುಪಡಿಸಿ ಪೊಲೀಸರು ಮಫ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವುದು ಕಂಡು ಬಂದರೆ ಅಂತಹವರ ವಿರುದ್ಧ ಕ್ರಮ ತೆಗೆದುಕೊಳ್ಳವುದಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆ ರವಾನಿಸಿದ್ದಾರೆ.
ಭಾಸ್ಕರ್ ರಾವ್
ನಗರದಲ್ಲಿ ಸಮವಸ್ತ್ರ ಧರಿಸದೆ ಮಫ್ತಿಯಲ್ಲಿ ವಿವಿಧ ಚಟುವಟಿಕೆಯಲ್ಲಿ ತೊಡಗಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಕ್ರೈಂ ಸಿಬ್ಬಂದಿ ಹೊರತುಪಡಿಸಿ ಎಲ್ಲಾ ಸಿಬ್ಬಂದಿ ಸಮವಸ್ತ್ರ ಧರಿಸಿ ಕಾರ್ಯನಿರ್ವಹಿಸಿವುದು ಕಡ್ಡಾಯ. ಒಂದು ವೇಳೆ ಶಿಸ್ತು ಮೀರಿದರೆ ಆಯಾ ಠಾಣಾ ಇನ್ ಸ್ಪೆಕ್ಟರ್ಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.