ಬೆಂಗಳೂರು :ನಾಳೆ ದೇಶಾದ್ಯಂತ ಜನತಾ ಕರ್ಪ್ಯೂ ಘೋಷಿಸಿರುವ ಹಿನ್ನೆಲೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಪತ್ರಿಕಾಗೋಷ್ಠಿ ನಡೆಸಿದರು. ಆರೋಗ್ಯದ ದೃಷ್ಟಿಯಿಂದಾಗಿ ಮುಂಜಾಗ್ರತಾ ಕ್ರಮಗಳನ್ನ ಪಾಲಿಸುವಂತೆ ಸೂಚನೆ ನೀಡಿದ್ದಾರೆ.
ಜನತಾ ಕರ್ಫ್ಯೂ ಹಿನ್ನೆಲೆ.. ಬೆಂಗಳೂರು ನಗರ ಪೊಲೀಸರು ಕೈಗೊಂಡ ಕ್ರಮಗಳೇನು? - ಕೊರೊನಾ ಸುದ್ದಿ
ಸೋಂಕಿತರು ವಿಷಯ ಮುಚ್ಚಿಡುತ್ತಿರುವುದು ಬೆಳಕಿಗೆ ಬಂದಿದೆಯಂತೆ. ಅಂತಹವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತಂತೆ. ನಗರದ ಎಲ್ಲಾ ಕಡೆ ಬ್ಯಾರಿಕೇಡ್ಗಳನ್ನು ಹಾಕಿ ಪೊಲೀಸರು ಗಸ್ತು ಕಾಯಲಿದ್ದಾರೆ.
ಪ್ರಧಾನಿಯವರ ಆಶಯದಂತೆ ದೇಶದೆಲ್ಲೆಡೆ ಜನತಾ ಕರ್ಫ್ಯೂ ನಡೆಯಲಿದೆ. ಇದನ್ನ ಸಾರ್ವಜನಿಕರು ಬಹಳ ಗಂಭೀರವಾಗಿ ಪರಿಗಣಿಸಬೇಕು. ಕುಟುಂಬ ಸದಸ್ಯರ ಜೊತೆ ಎಲ್ಲರೂ ಮನೆಯಲ್ಲಿರಬೇಕು. ಪ್ರವಾಸ, ವಾಕಿಂಗ್, ಕಾರ್ಯಕ್ರಮಗಳು ಎಂದು ಹೊರಗಡೆ ಓಡಾಡಬಾರದು. ರಸ್ತೆ ಮೇಲೆ ತಿರುಗಾಡ್ತಿದ್ರೆ ಐಪಿಸಿ ಸೆಕ್ಷನ್ 31(L) ಅಡಿಯಲ್ಲಿ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಪೊಲೀಸ್, ಆರೋಗ್ಯ ಇಲಾಖೆ ಮತ್ತು ಬಿಬಿಎಂಪಿ ಜೊತೆ ಮಾತುಕತೆ ನಡೆಸ್ತಿದ್ದೇವೆ. ಸೋಂಕಿತರು ವಿಷಯ ಮುಚ್ಚಿಡುತ್ತಿರುವುದು ಬೆಳಕಿಗೆ ಬರುತ್ತಿದೆ. ಅಂತಹವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ನಗರದ ಎಲ್ಲಾ ಕಡೆ ಬ್ಯಾರಿಕೇಡ್ಗಳನ್ನು ಹಾಕಿ ಪೊಲೀಸರು ಗಸ್ತು ಕಾಯಲಿದ್ದಾರೆ. ಎಲ್ಲಾ ಡಿಸಿಪಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.