ನೆಲಮಂಗಲ: ಬಿಬಿಎಂಪಿ ಕಸ ವಿಲೇವಾರಿ ಲಾರಿಗೆ ಪಲ್ಸರ್ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಬಿಬಿಎಂಪಿ ಕಸ ವಿಲೇವಾರಿ ಲಾರಿಗೆ ಬೈಕ್ ಸವಾರ ಬಲಿ
ಬಿಬಿಎಂಪಿಯ ಕಸ ವಿಲೇವಾರಿ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾಗಡಿ ರಸ್ತೆಯ ಮಾಚೋಹಳ್ಳಿ ಬಳಿ ನಡೆದಿದೆ.
ಮೃತ ಬೈಕ್ ಸವಾರ
ಬೆಂಗಳೂರು ಉತ್ತರ ತಾಲೂಕಿನ ಮಾಗಡಿ ರಸ್ತೆಯ ಮಾಚೋಹಳ್ಳಿ ಬಳಿ ಘಟನೆ ನಡೆದಿದೆ. ಅಪಘಾತದಲ್ಲಿ ಗದಗ ಮೂಲದ ಅರ್ಜುನ್ (19) ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಯುವಕ ಹಿಮಾಲಯ ಪ್ರಾಡಕ್ಟ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.